ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

Vishwanath S
Updated On : 26 May 2013, 1:32 am

ನರಗುಂದ: ನರಗುಂದ ತಾಲೂಕಿನ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ 2013-14ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಲೂಕಿನ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ತಮ್ಮ ಶಾಲಾ ಮೂಲದಾಖಲೆಗಳ ಮೂಲಕ ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನವಾಗಿದ್ದು, ಭರ್ತಿ ಮಾಡಿದ ಅರ್ಜಿ ಫಾರ್ಮ್ ಜತೆಗೆ ಕಳೆದ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ತಹಸೀಲ್ದಾರ್‌ರಿಂದ ಪಡದ ಜಾತಿ ಹಾಗೂ ಆದಾಯ ಪ್ರಮಾಣಪತ್ರ ಹಾಗೂ ಅಭ್ಯರ್ಥಿಯ 2 ಪಾಸ್‌ಪೋರ್ಟ್ ಸೈಜಿನ ಭಾವಚಿತ್ರ ಇವುಗಳ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳಲ್ಲಿ ಅರ್ಜಿ ಸಲ್ಲಿಸಬೇಕು. ಅಪೂರ್ಣ ಹಾಗೂ ತಡವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.

ಇಂದು ಜಿಲ್ಲಾ ಕಸಾಪ ಕಾರ್ಯಕಾರಿಣಿ ಸಭೆ
ಗದಗ:  ಜೂನ್ 14, 15ರಂದು ಮುಂಡರಗಿಯಲ್ಲಿ ಜರುಗುವ ಗದಗ ಜಿಲ್ಲಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಮೇ 26ರಂದು ಮಧ್ಯಾಹ್ನ 3 ಗಂಟೆಗೆ ಮುಂಡರಗಿಯ ಪುರಸಭೆಯ ಆವರಣದಲ್ಲಿರುವ ಗಾಂಧಿಭವನದಲ್ಲಿ ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿಯ ಸಭೆಯನ್ನು ಕರೆಯಲಾಗಿದೆ.
ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ವಹಿಸುವರು. ಜಿಲ್ಲಾ ಕಸಾಪ ಕಾರ್ಯಕಾರಿಣಿ ಸರ್ವ ಪದಾಧಿಕಾರಿಗಳು ಸಭೆ ಸೇರಿ ಮುಂಡರಗಿಯಲ್ಲಿ ಜೂನ್ 14, 15ರಂದು ಜರುಗಲಿರುವ ಗದಗ ಜಿಲ್ಲಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಸೂಕ್ತ ತೀರ್ಮಾನಗಳನ್ನು ತೆಗೆದುಕೊಳ್ಳಲಿದ್ದು, ಕಸಾಪದ ಎಲ್ಲ ಸದಸ್ಯರು ಪಾಲ್ಗೊಳ್ಳುವಂತೆ ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿ ಶರಣು ಗೋಗೇರಿ, ಡಾ. ಸಂಗಮೇಶ ತಮ್ಮನಗೌಡರ ಹಾಗೂ ಕೋಶಾಧ್ಯಕ್ಷ ಮಲ್ಲೇಶ ಡಿ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉತ್ತಮ ಸೇವೆ: ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಗದಗ: ಮಹಿಳಾ ಮತ್ತ ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ಇಬ್ಬರಿಗೆ ತಲಾ ರು. 25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ 2 ಸಂಸ್ಥೆಗಳಿಗೆ ತಲಾ ರು. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯೆಂದು ಪ್ರದಾನ ಮಾಡಿ ಗೌರವಿಸುತ್ತದೆ. 2013ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪ ನಿರ್ದೇಶಕರ ಕಚೇರಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆಡಳಿತ ಭವನ ಕೊ.ಸಂ. 6 ಗದಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಜಿಲ್ಲೆಯ ಉಪನಿರ್ದೇಶಕರ ಕಚೇರಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆಡಳಿತ ಭವನ, ಕೊಠಡಿ ಸಂಖ್ಯೆ 6 ಗದಗ ಇಲ್ಲಿಗೆ ಜೂನ್ 15ರಂದು ಸಂಜೆ 5 ಗಂಟೆಗೆ ಒಳಗೆ ಸಲ್ಲಿಸತಕ್ಕದ್ದು, ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.  
ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಗೆ ಅರ್ಜಿ ಆಹ್ವಾನ
ಗದಗ: ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ವತಿಯಿಂದ ನೀಡಲಾಗುವ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿಗೆ ಅರ್ಹ ರೈತರು, ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಅರ್ಹ ರೈತರು, ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ವಿಸ್ತರಣಾ ಮುಂದಾಳು, ವಿಸ್ತರಣಾ ಶಿಕ್ಷಣ ಘಟಕ, ಕೃಷಿ ಸಂಶೋಧನಾ ಕೇಂದ್ರ, ಮುಂಡರಗಿ ರಸ್ತೆ, ಗದಗ ಇವರಲ್ಲಿ ಪಡೆದು ಭರ್ತಿ ಮಾಡಿ ತಾಲೂಕು ಮಟ್ಟದ ಕೃಷಿ ಅಧಿಕಾರಿಗಳ ಶಿಫಾರಸಿನೊಂದಿಗೆ ಜೂನ್ 5ರೊಳಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಸ್ತರಣಾ ಮುಂದಾಳು, ವಿಸ್ತರಣಾ ಶಿಕ್ಷಣ ಘಟಕ ದೂ. 08372-235650 ಇಲ್ಲಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಅರ್ಜಿ ಆಹ್ವಾನ
ಗದಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2013-14ನೇ ಸಾಲಿಗೆ ಸ್ವಯಂ ಉದ್ಯೋಗಕ್ಕಾಗಿ ಸ್ವಾವಲಂಬನೆ ಸಾಲದ ಯೋಜನೆ, ಅರಿವು ಯೋಜನೆ, ಗಂಗಾ ಕಲ್ಯಾಣ ಯೋಜನೆ, ಶ್ರಮಶಕ್ತಿ ಯೋಜನೆ, ಸಣ್ಣ ಸಾಲದ ಯೋಜನೆ, ಮನೆ ನಿರ್ಮಾಣ ಮಾಡಲು ಸಹಾಯಾನುದಾನ ಯೋಜನೆಗಳಲ್ಲಿ ಅರ್ಹ ಅಲ್ಪಸಂಖ್ಯಾತರ ವರ್ಗಗಳ ಜನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ ಜಾತಿಗೆ ಸೇರಿದವರಾಗಿರಬೇಕು. ವಯಸ್ಸು 18 ರಿಂದ 55 ವರ್ಷಗಳೊಳಗಿರಬೇಕು. ಈ ಯೋಜನೆಯಡಿಯಲ್ಲಿ ವಿವಿಧ ಬ್ಯಾಂಕುಗಳು, ಹಣಕಾಸು ಸಂಸ್ಥೆಗಳ ಮೂಲಕ ಕ್ರಿಶ್ಚಿಯನ್ ಸಮುದಾಯದ ಜನರು ಮನೆ ಕಟ್ಟಲು ಪಡೆಯುವ ಸಾಲದ ಗರಿಷ್ಟ ಮೊತ್ತ ರು. 5 ಲಕ್ಷ ವರೆಗೆ ಪಡೆದ ಸಾಲಕ್ಕೆ ಬ್ಯಾಂಕು, ಹಣಕಾಸು ಸಂಸ್ಥೆಗಳ ಮೂಲಕ ಬಂದಿರುವ ಪ್ರಸ್ತಾವನೆಗಳಿಗೆ ಸಹಾಯಾನುದಾನ ಬಡ್ಡಿ ರಿಯಾಯಿತಿ ರೂಪದಲ್ಲಿ ನೀಡಲಾಗುವುದು. ಫಲಾನುಭವಿಗಳ ಕುಟುಂಬದ ವಾರ್ಷಿಕ ವರಮಾನ ರು. 1,50000 ಗಳನ್ನು ಮೀರಿರಬಾರದು. ಈ ಮೇಲಿನ ಯೋಜನೆಗಳಲ್ಲಿ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಮೇಲೆ ತಿಳಿಸಿರುವ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ವ್ಯವಸ್ತಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ಆಡಳಿತ ಭವನ, 2ನೇ ಮಹಡಿ ರೂ. ನಂ. 211, ಗದಗ ಇವರಿಗೆ ಜೂನ್ 30 ರೊಳಗಾಗಿ ಸಲ್ಲಿಸುವುದು. ತದನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. (ಅರ್ಜಿ ನಮೂನೆ ಮಾತ್ರ ವೆಬ್‌ಸೈಟ್ www.kmdc.inzloan forms html ನಲ್ಲಿ ಪಡೆದ ಅರ್ಜಿಯನ್ನು ಈ ವಿಳಾಸಕ್ಕೆ dmgadagkmdczgmail.com  ಆನ್‌ಲೈನ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಗದಗ ಜಿಲ್ಲೆ ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement