ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅನ್ನದಾನೀಶ್ವರಶ್ರೀ

Lingaraj Badiger
Updated On : 29 May 2013, 11:53 am

ಮುಂಡರಗಿ: ಜೂನ್ 15 ಮತ್ತು 16ರಂದು ಮುಂಡರಗಿಯಲ್ಲಿ ನಡೆಯಲಿರುವ ಗದಗ ಜಿಲ್ಲಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಜಗದ್ಗುರು ನಾಡೋಜ ಅನ್ನದಾನೀಶ್ವರ ಸ್ವಾಮೀಜಿಗಳನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಮತ್ತು ಶಾಸಕ ರಾಮಕೃಷ್ಣ ದೊಡ್ಡಮನಿ ಅವರ ನೇತೃತ್ವದಲ್ಲಿ ಮಂಗಳವಾರ ಸ್ವಾಮೀಜಿಗೆ ಅಧಿಕೃತ ಆಹ್ವಾನ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಮಕೃಷ್ಣ ದೊಡ್ಡಮನಿ, ಪೂಜ್ಯರು ಸಾಹಿತ್ಯ ಕ್ಷೇತ್ರದಲ್ಲಿ ಒಂದು ವಿಶ್ವವಿದ್ಯಾಲಯ ಮಾಡಲಾರದಷ್ಟು ಸಾಹಿತ್ಯ ಕೃಷಿ ಮಾಡಿದ್ದಾರೆ. ಶ್ರೀಮಠದಿಂದ 220ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದಾರೆ. ಪೂಜ್ಯರೇ ಸ್ವತಃ 118 ಪುಸ್ತಕಗಳನ್ನು ಬರೆಯುವ ಮೂಲಕ ವಚನ ಸಾಹಿತ್ಯ, ಪ್ರವಾಸ ಸಾಹಿತ್ಯ, ಧಾರ್ಮಿಕ ಸಾಹಿತ್ಯ, ಮಕ್ಕಳ ಸಾಹಿತ್ಯ, ಶರಣ ಸಾಹಿತ್ಯ ಮುಂತಾದ ಕ್ಷೇತ್ರಗಳಲ್ಲಿ ಕೃಷಿ ಮಾಡುವುದರೊಂದಿಗೆ ಸಾಹಿತ್ಯ ಕ್ಷೇತ್ರದ ದಿಗ್ಗಜ ಸ್ವಾಮೀಜಿಗಳಾಗಿದ್ದಾರೆ ಎಂದರು. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಣ್ಣ ಕುರಿ ಮಾತನಾಡಿದರು. ಶರಣು ಗೊಗೇರಿ, ಡಿ.ಎಚ್. ಮಲ್ಲೇಶ, ಎಸ್.ಬಿ.ಕೆ. ಗೌಡರ, ಕೃಷ್ಣ ಸಾಹುಕಾರ, ಕಸಾಪ ತಾಲೂಕು ಅಧ್ಯಕ್ಷ ಎಸ್.ಬಿ. ಹಿರೇಮಠ, ಕಾಶೀನಾಥ ಶಿರಬಡಗಿ, ಪ್ರೊ.ಎ.ವೈ. ನವಲಗುಂದ, ಡಾ. ಬಸವರಾಜ ಮೇಟಿ, ಎಂ.ಡಿ. ಭಾವಿಮನಿ, ಪ್ರೊ.ಎಸ್.ಆರ್. ಬಸಾಪುರ, ಸಂಗಮೇಶ ತಮ್ಮನಗೌಡರ, ಪಿ.ಸಿ. ಕಲಹಾಳ, ಎಫ್.ಎಸ್. ಕರಿದುರಗನವರ, ಕಿಶೋರಬಾಬು ನಾಗರಕಟ್ಟಿ, ಎನ್.ಎನ್. ಕಲಕೇರಿ, ಶಂಕರ ಕುಕನೂರ, ಆರ್.ಎಲ್. ಬದಾಮಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement