ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸಾಹಿತ್ಯ ಸಮ್ಮೇಳನ ವ್ಯವಸ್ಥಿತವಾಗಿ ಆಚರಿಸಲು ಕರೆ

Lingaraj Badiger
Updated On : 1 Jun 2013, 12:03 pm

ಗದಗ: ಜೂನ್ 15, 16ರಂದು ಮುಂಡರಗಿಯಲ್ಲಿ ಜರುಗಲಿರುವ 5ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವ್ಯವಸ್ಥಿತವಾಗಿ, ಅರ್ಥಪೂರ್ಣವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಎಸ್.ಟಿ. ಅಂಜನಕುಮಾರ್ ಅಧಿಕಾರಿಗಳಿಗೆ ಕರೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಸಮ್ಮೇಳನ ನಾಡ ಹಬ್ಬ ಇದ್ದ ಹಾಗೆ. ಎಲ್ಲ ಸಂಘಟನೆಗಳ ಸಹಕಾರದೊಂದಿಗೆ ಸಮ್ಮೇಳನ ಯಶಸ್ವಿಗೊಳಿಸಬೇಕು. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಲಾ ತಂಡಗಳ ಆಯ್ಕೆ, ಪುಸ್ತಕ ಮಳಿಗೆಗಳ ನಿರ್ವಹಣೆ ಅಚ್ಚುಕಟ್ಟಾಗಿರಬೇಕು ಎಂದು ಜಿಲ್ಲೆಯ ವಿವಿಧ ಅಧಿಕಾರಿಗಳಿಗೆ ಹೇಳಿದರು.
ಸಭೆಯಲ್ಲಿ ವೇದಿಕೆಯ ಅಲಂಕಾರ, ಗೋಷ್ಠಿಗಳು, ಊಟ ಸೇರಿದಂತೆ ಸಕಲ ವ್ಯವಸ್ಥೆಗಳ ಕುರಿತು ಚರ್ಚಿಸಲಾಯಿತು. ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಬನಶಂಕರಿ ಅಂಗಡಿ ಸ್ವಾಗತಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ, ಉಪವಿಭಾಗಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ, ಜಿಲ್ಲಾ ಕಸಾಪ ಅಧ್ಯಕ್ಷ ಶಿವಣ್ಣ ಕುರಿ, ಜಿ.ಪಂ. ಉಪಕಾರ್ಯದರ್ಶಿ ಉಮೇಶ, ಜಿ.ಪಂ. ಯೋಜನಾಧಿಕಾರಿ ದಿನೇಶ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಶಶಿಧರ ಕುರೇರ, ಕಸಾಪ ಗೌರವ ಕಾರ್ಯದರ್ಶಿ ಶರಣು ಗೋಗೇರಿ, ಪ್ರೊ. ಕೆ.ಬಿ.ತಳಗೇರಿ, ಕೆ.ಎಚ್.ಬೇಲೂರ, ಡಿ.ವಿ. ಬಡಿಗೇರ, ಕಿಶೋರ ನಾಗರಕಟ್ಟಿ, ಕವಿತಾ ದಂಡಿನ, ಕಸಾಪದ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement