ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಭಾಷಾಭಿಮಾನ ಬೆಳೆಸಿಕೊಳ್ಳಿ

Vishwanath S
Updated On : 9 Nov 2013, 11:55 am

ಗದಗ: ಎಲ್ಲರೂ ಕನ್ನಡ ಭಾಷಾಭಿಮಾನ ಬೆಳಸಿಕೊಳ್ಳಬೇಕು. ವಿದೇಶಿ ಸಂಸ್ಕೃತಿ, ವಿದೇಶಿ ಭಾಷೆಯ ವ್ಯಾಮೋಹದಿಂದಾಗಿ ಕನ್ನಡ ತನ್ನತನವನ್ನು ಕಳೆದುಕೊಳ್ಳಬಾರದು ಎಂದು ಕನಕದಾಸ ಶಿಕ್ಷಣ ಸಮಿತಿ ಅಧ್ಯಕ್ಷ ಡಾ. ಬಿ.ಎಫ್. ದಂಡಿನ ಹೇಳಿದರು.
ಕನಕದಾಸ ಶಿಕ್ಷಣ ಸಮಿತಿ ಆಶ್ರಯದಲ್ಲಿ ಇತ್ತೀತಿಗೆ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡಿಗರಲ್ಲಿ ಭಾಷಾಭಿಮಾನದ ಕೊರತೆ ಇರುವುದು ವಿಷಾದನೀಯ. ಕಾರಣ ಪ್ರತಿಯೊಬ್ಬರೂ ಕನ್ನಡ ಭಾಷೆಯ ಮೇಲೆ ಅಭಿಮಾನ ಹೊಂದಿ ನಾಡಿನ ಸಮೃದ್ಧಿಯನ್ನು ಎಲ್ಲೆಡೆ ಪಸರಿಸಬೇಕು ಎಂದರು.ಪ್ರಾಚಾರ್ಯ ಬಿ.ಆರ್. ಜಾಲಿಹಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ಕಾಲೇಜಿನ ಪ್ರಾಚಾರ್ಯ ಎಂ.ಕೆ. ಕಾಮನಹಳ್ಳಿ, ಆಡಳಿತಾಧಿಕಾರಿ ಪಿ.ಎಸ್. ಕಾಶಪ್ಪನವರ ಸೇರಿದಂತೆ ಎಲ್ಲ ಅಂಗ ಸಂಸ್ಥೆಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿ.ಎನ್. ಮರಗುದ್ದಿ ನಿರೂಪಿಸಿದರು. ಎಸ್.ಎನ್. ಜಾಲಿಹಾಳ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement