ಇಂದು ಕಾಂಗ್ರೆಸ್ ಸಭೆ
ಗದಗ: ನ. 12ರ ಬೆಳಗ್ಗೆ 11 ಗಂಟೆಗೆ ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆಯನ್ನು ನಗರದ ದಿ. ಗದಗ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದೆ. ರಾಜ್ಯದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಎಚ್. ಹನುಮಂತಯ್ಯ, ಉಸ್ತುವಾರಿ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಎನ್. ಮಂಜುನಾಥ ಹಾಗೂ ಪರಿಶಿಷ್ಟ ಪಂಗಡ ಘಟಕದ ರಾಜ್ಯಾಧ್ಯಕ್ಷ ಟಿ. ಈಶ್ವರ ಪಾಲ್ಗೊಳ್ಳುವರು. ಕಾಂಗ್ರೆಸ್ನ ಎಲ್ಲ ಮುಖಂಡರು ಆಗಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಕೋರಿದ್ದಾರೆ.
ಸಭೆ: ವೇಳೆ ಬದಲಾವಣೆ
ಗದಗ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ಜಿಲ್ಲೆಯ ಪ್ರಗತಿ ಪರಿಶೀಲನೆಯ ತ್ರೈಮಾಸಿಕ ಸಭೆಯು ನ. 12ರ ಬೆಳಗ್ಗೆ 11ಕ್ಕೆ ಬದಲಾಗಿ ಅಂದೇ ಮಧ್ಯಾಹ್ನ 2.30 ಗಂಟೆಗೆ ಜಿಪಂ ಸಭಾಂಗಣದಲ್ಲಿ ಜರುಗಲಿದೆ ಎಂದು ಸಿಇಒ ವಿ.ಜಿ. ತುರಮರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.