ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಜಲಸಂಪನ್ಮೂಲ ಸಚಿವರ ಪ್ರವಾಸ

Lingaraj Badiger
Updated On : 13 Nov 2013, 10:53 am

ಗದಗ: ರಾಜ್ಯದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ನ. 15ರಂದು ಹಡಗಲಿಯಿಂದ ಆಗಮಿಸಿ ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯವರೆಗೆ ಮುಂಡರಗಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಮಗಾರಿಗಳ ವೀಕ್ಷಣೆ ಮಾಡುವರು. ನಂತರ ಗದಗ ಮೂಲಕ ಸಂಜೆ 7 ಗಂಟೆಗೆ ಹುಬ್ಬಳ್ಳಿಗೆ ಬಂದು ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.
ಆಪ್ತ ಸಮಾಲೋಚಕರ ಆಯ್ಕೆ ಪಟ್ಟಿ
ಗದಗ: ಗದಗ ಜಿಲ್ಲಾಸ್ಪತ್ರೆಯ ಎ.ಆರ್.ಟಿ. ಕೇಂದ್ರಕ್ಕೆ ನೇಮಿಸಲು ಆಪ್ತಸಮಾಲೋಚಕರ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ನ. 19 ರೊಳಗಾಗಿ ಸಲ್ಲಿಸಲು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಕನಿಷ್ಠ ವೇತನ: ಸಲಹೆಗೆ ಆಹ್ವಾನ
ಗದಗ: ದರ್ಜಿ ಉದ್ದಿಮೆ ಕನಿಷ್ಠ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರವು ಉಪಸಮಿತಿ ರಚಿಸಿದೆ. ಇದಕ್ಕೆ ಸಂಬಂಧಿತರು ತಮ್ಮ ಸಲಹೆಗಳನ್ನು ಲಿಖಿತ ರೂಪದಲ್ಲಿ ನ. 15ರ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ 124, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ ಗದಗ ಇಲ್ಲಿಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಲಾಗಿದೆ.
ಇಂದು ಕುರುಬ ಸಮಾಜ ಸಭೆ
ಶಿರಹಟ್ಟಿ:  ನ. 20 ರಂದು ತಾಲೂಕು ಆಡಳಿತದ ವತಿಯಿಂದ ಕನಕದಾಸರ ಜಯಂತಿ ಆಚರಿಸುವ ಕುರಿತು ಚರ್ಚಿಸಲು ನ. 13ರ ಬೆಳಗ್ಗೆ 11 ಗಂಟೆಗೆ ಪಟ್ಟಣದ ಬೀರೇಶ್ವರ ದೇವಸ್ಥಾನದಲ್ಲಿ ತಾಲೂಕು ಹಾಲುಮತ ಕುರುಬ ಸಮಾಜದ ಸಭೆ ಕರೆಯಲಾಗಿದ್ದು, ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ-ಸೂಚನೆ ನೀಡಬೇಕು ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ರಾಮಣ್ಣ ಡಂಬಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement