ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ ದೊಡ್ಡಮನಿ ಸಲಹೆ

Lingaraj Badiger
Updated On : 14 Nov 2013, 11:16 am

ಶಿರಹಟ್ಟಿ: ಗ್ರಾಮೀಣ ಪ್ರದೇಶದ ಜನರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ಸರ್ಕಾರ ವಿವಿಧ ಯೋಜನೆಗಳ ಮೂಲಕ ಲಕ್ಷಾಂತರ ರು. ಅನುದಾನ ನೀಡುತ್ತಿದೆ. ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ನಡೆಯಬೇಕು ಎಂದು ಗುತ್ತಿಗೆದಾರರಿಗೆ ಶಾಸಕ ರಾಮಕೃಷ್ಣ ದೊಡ್ಡಮನಿ ಸೂಚಿಸಿದರು. ಅವರು ಬುಧವಾರ ಶಿರಹಟ್ಟಿ ಪಟ್ಟಣ ವ್ಯಾಪ್ತಿಯ ಕಡಕೋಳ ರಸ್ತೆ ಮಾರ್ಗದ ಗಜೇಂದ್ರಗಡ-ಸೊರಬ ರಾಜ್ಯ ಹೆದ್ದಾರಿಯಲ್ಲಿ ರು. 10 ಲಕ್ಷ ವೆಚ್ಚದಲ್ಲಿ ರಸ್ತೆಯ 2 ಬದಿಯಲ್ಲಿ ಆರ್‌ಸಿಸಿ ಗಟಾರ ಹಾಗೂ ಅವಶ್ಯವಿದ್ದಲ್ಲಿ ಎಚ್.ಪಿ. ಪೈಪ್ ಹಾಕುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವ ನೀಡಿದೆ. ಅಭಿವೃದ್ಧಿ ವಿಷದಲ್ಲಿ ಯಾರೂ ರಾಜಕೀಯ ಮಾಡದೇ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಅಭಿವೃದ್ಧಿಗಾಗಿ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿ ಕೈಗೊಂಡಲ್ಲಿ ಇನ್ನು ಹೆಚ್ಚಿನ ಅನುದಾನ ತರುವುದಾಗಿ ಭರವಸೆ ನೀಡಿದರು. ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಸದಸ್ಯ ಹುಮಾಯೂನ ಮಾಗಡಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈ.ಎಸ್. ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣಗೌಡ ಪಾಟೀಲ, ಪಪಂ ಸದಸ್ಯ ಸಿ.ಕೆ. ಮುಳಗುಂದ, ಬುಡನಶ್ಯಾ ಮಕಾನದಾರ, ದೇವಪ್ಪ ಲಮಾಣಿ, ಮಂಜು ಘಂಟಿ, ಸುರೇಶ ಅಕ್ಕಿ, ಎಂ.ಎಚ್. ಮ್ಯಾಗೇರಿ, ಶಾಖಾಧಿಕಾರಿ ಸಿ.ಆರ್. ಚನ್ನಪ್ಪಗೌಡರ, ಅಭಿಯಂತ ಗುರುನಾಥ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement