ದಿಂಗಾಲೇಶ್ವರ ಮಠದ ನೂತನ ಕಟ್ಟಡ ಉದ್ಘಾಟನೆ: ಪೂರ್ವಭಾವಿ ಸಭೆ ಇಂದು
ಲಕ್ಷ್ಮೇಶ್ವರ: ಸಮೀಪದ ಬಾಲೆಹೊಸೂರಿನ ದಿಂಗಾಲೇಶ್ವರ ಮಠದ ನೂತನ ಕಟ್ಟಡ ಉದ್ಘಾಟನೆಯ ಪೂರ್ವಭಾವಿ ಸಭೆಯು ನ. 15ರ ಮಧ್ಯಾಹ್ನ 2.30ಕ್ಕೆ ಶ್ರೀಮಠದಲ್ಲಿ ಜರುಗಲಿದೆ ಎಂದು ಕುಮಾರ ದಿಂಗಾಲೇಶ್ವರ ಶ್ರೀಗಳು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪೂರ್ವಭಾವಿ ಸಭೆಯ ಸಾನ್ನಿಧ್ಯವನ್ನು ಹುಬ್ಬಳ್ಳಿಯ ಮೂರುಸಾವಿರಮಠದ ಗುರುಸಿದ್ದರಾಜ ಯೋಗೀಂದ್ರ ಶ್ರೀಗಳು ವಹಿಸಿಕೊಳ್ಳಲಿದ್ದು, ಸಭೆಯ ನೇತೃತ್ವವನ್ನು ಹಾವೇರಿಯ ಹುಕ್ಕೇರಿಮಠದ ಸದಾಶಿವ ಶ್ರೀಗಳು ವಹಿಸುವರು. ಸಚಿವ ಎಚ್.ಕೆ.ಪಾಟೀಲ, ಸಂಸದ ಶಿವಕುಮಾರ ಉದಾಸಿ, ಶಾಸಕ ರಾಮಕೃಷ್ಣ ದೊಡ್ಡಮನಿ, ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಮನೋಹರ ತಹಸೀಲ್ದಾರ್, ಯು.ಬಿ. ಬಣಕಾರ, ಶ್ರೀನಿವಾಸ ಮಾನೆ, ಬೀಳಗಿಯ ಶಾಸಕ ಜೆ.ಟಿ. ಪಾಟೀಲ ಹಾಗೂ ಮಾಜಿ ಸಚಿವ ಸಿ.ಎಂ. ಉದಾಸಿ, ಜಿ.ಎಂ. ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ಎಸ್.ಎನ್. ಪಾಟೀಲ, ರಾಮಣ್ಣ ಲಮಾಣಿ, ಡಿ.ಆರ್.ಪಾಟೀಲ, ನೆಹರೂ ಓಲೇಕಾರ್, ಶಿವಣ್ಣ ತಿಳುವಳ್ಳಿ, ಕೆ.ಬಿ. ಕೋಳಿವಾಡ, ಕೆಎಂಎಫ್ ಅಧ್ಯಕ್ಷ ಬಸವರಾಜ ಅರಬಗೊಂಡ, ಶಂಕ್ರಣ್ಣ ಮುನವಳ್ಳಿ, ಮಲ್ಲಿಕಾರ್ಜುನ ಸಾಹುಕಾರ ಮತ್ತಿತರರು ಆಗಮಿಸಲಿದ್ದಾರೆ