ಮೋದಿ ರ್ಯಾಲಿಗೆ ಜಿಲ್ಲೆಯಿಂದ 22 ಬಸ್
ನರಗುಂದ: ಬೆಂಗಳೂರಲ್ಲಿ ನ. 17ರಂದು ನಡೆಯುತ್ತಿರುವ 'ಭಾರತ ಗೆಲ್ಲಿಸಿ' ನರೇಂದ್ರ ಮೋದಿಯವರ ರ್ಯಾಲಿಗೆ ಗದಗ ಜಿಲ್ಲೆಯಿಂದ 22 ಬಸ್ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ನರಗುಂದ ಮತಕ್ಷೇತ್ರದಿಂದ 7 ಬಸ್ಗಳು ತೆರಳಲಿವೆ. ನರಗುಂದ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಧ್ಯಕ್ಷ ವಿ.ಎಸ್. ಹಿರೇಮಠ ಈ ಕುರಿತು ಮಾಹಿತಿ ನೀಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದ ನಂತರ ಕಾರ್ಯಕರ್ತರಲ್ಲಿ ತೀವ್ರ ನಿರಾಸೆಯನ್ನುಂಟು ಮಾಡಿತ್ತು. ಆದರೆ ಮುಂಬರುವ ಲೋಕಸಭಾ ಚುನಾವಣೆಯ ನಿಮಿತ್ತ ಬೆಂಗಳೂರಲ್ಲಿ ನ. 17ರಂದು ನಡೆಯುತ್ತಿರುವ ಭಾರತ ಗೆಲ್ಲಿಸಿ ನರೇಂದ್ರ ಮೋದಿಯವರ ರ್ಯಾಲಿಗೆ ಹೆಚ್ಚಿನ ಜನಬೆಂಬಲ ವ್ಯಕ್ತವಾಗುತ್ತಿದೆ. ಇದು ರಾಜ್ಯ ಬಿಜೆಪಿ ಕಾರ್ಯಕರ್ತರಲ್ಲಿ, ಮುಖಂಡರ ಮೊಗದಲ್ಲಿ ಉತ್ಸಾಹ ಕಂಡು ಬರುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗಳಿಸಲು ರಾಜ್ಯದ ಬಿಜೆಪಿಯ ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ. ರಾಜ್ಯದಲ್ಲಿಯೂ ನಮೋ ಅವರ ಅಭಿಮಾನಿಗಳು ತುಂಬಾ ಇದ್ದು, ಇದಕ್ಕೆ ನ. 17 ರಂದು ಸೇರುವ ಲಕ್ಷಾಂತರ ಜನರೇ ಸಾಕ್ಷಿ ಎಂದು ಅವರು ತಿಳಿಸಿದ್ದಾರೆ.