ಸಹಕಾರಿ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಇರಲಿ
ಲಕ್ಷ್ಮೇಶ್ವರ: ಸಹಕಾರಿ ಕ್ಷೇತ್ರದಲ್ಲಿ ನಿಸ್ವಾರ್ಥ ಹಾಗೂ ಪ್ರಾಮಾಣಿಕ ಸೇವೆ ಸಲ್ಲಿಸಿದಾಗ ಮಾತ್ರ ಅದು ಬೆಳೆಯಲು ಸಾಧ್ಯವಾಗುತ್ತದೆ ಎಂದು ಕ.ರಾ.ಸ.ನೂ.ಗಿ. ಮಹಾಮಂಡಳದ ಅಧ್ಯಕ್ಷ ಎಸ್.ಪಿ. ಬಳಿಗಾರ ಹೇಳಿದರು.
ಅವರು ಈಚೆಗೆ ಪಟ್ಟಣದ ಮರ್ಚ್‌ಂಟ್ಸ್ ಕೋ-ಆಫ್ ಸೊಸೈಟಿಯ ಸಭಾಭವನದಲ್ಲಿ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರಿ ಯುನಿಯನ್, ಸಹಕಾರಿ ಇಲಾಖೆ, ಕೆ.ಸಿ.ಸಿ. ಬ್ಯಾಂಕ್ ಧಾರವಾಡ, ಕೆ.ಎಂ.ಎಫ್. ಧಾರವಾಡ, ಮರ್ಚ್‌ಂಟ್ಸ್ ಕೋ-ಆಪ್ ಸೊಸೈಟಿ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕಿನ ಎಲ್ಲ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆಯಂದು 60ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಉತ್ತಮ ಜೀವನಕ್ಕಾಗಿ ಸಹಕಾರಿ ಗೃಹ ನಿರ್ಮಾಣ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೆಸಿಸಿ ಬ್ಯಾಂಕ್ ನಿರ್ದೇಶಕ ಸುನೀಲ ಮಹಾಂತಶೆಟ್ಟರ್ ಹಾಗೂ ಶಿವಾನಂದ ನೆಲವಿಗಿ ಮಾತನಾಡಿ, ಸಹಕಾರಿ ಕ್ಷೇತ್ರ ಕಟ್ಟಲು ಅಂದಿನ ಹಿರಿಯರು ಶ್ರಮಿಸಿದ್ದು, ಅದನ್ನು ಬೆಳೆಸಿಕೊಂಡು ಹೋಗುವುದು ಇಂದಿನ ಅಗತ್ಯವಾಗಿದೆ ಎಂದರು. ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ಎಂ.ಎಂ. ಅಗಡಿ ವಹಿಸಿದ್ದರು. ಅತಿಥಿಗಳಾಗಿ ಕೆಎಂಎಫ್ ನಿರ್ದೇಶಕ ಹಾಗೂ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಸ್.ಪಿ. ಪಾಟೀಲ, ಸೋಮೇಶ್ವರ ನೂಲಿನ ಗಿರಣಿಯ ಅಧ್ಯಕ್ಷ ಪಿ.ಜಿ. ಉಪನಾಳ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಜಿ.ಬಿ. ಯತ್ನಳ್ಳಿ, ಗದಗ ಜಿಲ್ಲಾ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಬಿ. ಹಿರೇಮಠ, ಕೆ.ಸಿ.ಸಿ. ಬ್ಯಾಂಕ್ ಜಿಲ್ಲಾ ಉಸ್ತುವಾರಿ ವಿ.ಬಿ.ಪಾಟೀಲ, ಪುರಸಭೆ ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಿಮಠ, ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ವಿ. ಯಂಡಿಗೇರಿ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಸಿ.ಎಂ. ಮಾಕಾಪುರ, ಮರ್ಚ್‌ಂಟ್ಸ್ ಸೊಸೈಟಿಯ ಉಪಾಧ್ಯಕ್ಷ ಆರ್.ಸಿ. ಬಾಳಿಹಳ್ಳಿಮಠ, ಕಾರ್ಯದರ್ಶಿ ಐ.ಬಿ. ಭೂತರಡ್ಡಿ ಮುಂತಾದವರು ಉಪಸ್ಥಿತರಿದ್ದರು. ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರಶಾಂತ ಮುಧೋಳ ಉಪನ್ಯಾಸ ನೀಡಿದರು. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನಾಗರಾಜ ವಂದಿಸಿದರು. ಎ.ಎಸ್. ಹೆಬ್ಬಳ್ಳಿ ಸ್ವಾಗತಿಸಿ, ನಿರೂಪಿಸಿದರು.