ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸುದ್ದಿ ಸಂಕ್ಷೇಪ

Mainashree
Updated On : 25 Nov 2013, 11:04 am

ತೆರಿಗೆ ಸಲಹಾ ಸಮಿತಿ ಸಭೆ
ಗದಗ: ವಾಣಿಜ್ಯ ತೆರಿಗೆ ಇಲಾಖೆ ಧಾರವಾಡದ ಜಂಟಿ ಆಯುಕ್ತ ಬಿ.ಎ. ನಾಣಿಯ್ಯಪ್ಪ ಅವರು ನ. 27ರ ಮಧ್ಯಾಹ್ನ 4 ಗಂಟೆಗೆ ವಿಭಾಗೀಯ ಮಟ್ಟದಲ್ಲಿ ತೆರಿಗೆ ಸಲಹಾ ಸಮಿತಿ ತ್ರೈಮಾಸಿಕ ಸಭೆಯನ್ನು ಧಾರವಾಡ ವಾಣಿಜ್ಯ ತೆರಿಗೆ ಜಂಟಿ ಆಯುಕ್ತರ ಕಚೇರಿಯಲ್ಲಿ ಆಯೋಜಿಸಲಾಗಿದ್ದು, ನಮ್ಮ ಸಂಸ್ಥೆಯಿಂದ ವ್ಯಾಪಾರಸ್ಥರು ಹಾಗೂ ಕೈಗಾರಿಕೋದ್ಯಮದಾರರು ಎದುರಿಸುತ್ತಿರುವಂತಹ ಅನೇಕ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಲಾಗುವುದು. ಕಾರಣ ಸಂಸ್ಥೆಯ ಸದಸ್ಯರು ಹಾಗೂ ವ್ಯಾಪಾರಸ್ಥರು ತಮ್ಮ ಸಮಸ್ಯೆಗಳಿದ್ದಲ್ಲಿ ನ. 25 ರೊಳಗಾಗಿ ಲಿಖಿತವಾಗಿ ಸಂಸ್ಥೆಗೆ ಸಲ್ಲಿಸಿದಲ್ಲಿ ನಮ್ಮ ಸಂಸ್ಥೆಯಿಂದ ತಯಾರಿಸುವಂತಹ ಮನವಿಯಲ್ಲಿ ಅಳವಡಿಸಲಾಗುವುದೆಂದು ಸಂಸ್ಥೆಯ ಅಧ್ಯಕ್ಷ ಎಲ್.ಸಿ. ಲಿಂಬಯ್ಯಸ್ವಾಮಿಮಠ ತಿಳಿಸಿದ್ದು, ಮೌಲ್ಯವರ್ದಿತ ತೆರಿಗೆಯ ವಿಷಯದಲ್ಲಿ ಇರುವಂತಹ ಅನೇಕ ತೊಂದರೆಗಳನ್ನು ಜಂಟಿ ಆಯುಕ್ತರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದೆಂದು ಸಂಸ್ಥೆಯ ತೆರಿಗೆ ಉಪ ಸಮಿತಿ ಚೇರ್ಮನ್ ವೀರೇಶ ಕೂಗು, ಸಂಸ್ಥೆಯ ಗೌರವ ಕಾರ್ಯದರ್ಶಿ ವೀರಣ್ಣ ಬೇವಿನಮರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರೋಗ್ಯ ಸೇವಾ ಮಾಹಿತಿಗೆ 104ಕ್ಕೆ ಕರೆ ಮಾಡಿ
ಗದಗ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರೆಯಬೇಕೆಂಬುದು ಸರ್ಕಾರದ ಆಶಯ. ಅದರಲ್ಲೂ ಆರೋಗ್ಯ ಸೇವೆಯಂತಹ ಅತ್ಯವಶ್ಯ ಸೌಲಭ್ಯಗಳು ಸುಲಭವಾಗಿ ಎಲ್ಲರಿಗೂ ದೊರೆಯಬೇಕೆಂಬ ಸದುದ್ದೇಶದಲ್ಲಿ ಸರ್ಕಾರ ಸಾರ್ವಜನಿಕರಿಗೆ ಆರೋಗ್ಯ ಸೇವಾ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಈಚೆಗೆ 104 ಆರೋಗ್ಯ ವಾಣಿ ಯೋಜನೆಯನ್ನು ಜಾರಿಗೆ ತಂದಿದೆ. ಆರೋಗ್ಯ ಚಿಕಿತ್ಸೆಗಾಗಿ ಸಕಾಲದಲ್ಲಿ ಆಸ್ಪತ್ರೆಗಳನ್ನು ತಲುಪಲು ಸಾಧ್ಯವಾಗದ ಗ್ರಾಮೀಣ ಜನರು ದೂರವಾಣಿ ಮುಖಾಂತರ ತಜ್ಞ ವೈದ್ಯರ ಸಲಹೆ ಪಡೆಯಲು 104 ಆರೋಗ್ಯ ವಾಣಿ ಯೋಜನೆ ನೆರವಾಗುತ್ತಿದೆ. ಆರೋಗ್ಯ ಸಲಹೆ, ಆಪ್ತ ಸಮಾಲೋಚನೆ, ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ, ಆರೋಗ್ಯ ಸಂಸ್ಥೆ ಅಥವಾ ಸಿಬ್ಬಂದಿ ವಿರುದ್ಧ ದೂರು ದಾಖಲು ಸೇರಿದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಸಾಮಾನ್ಯ ಕಾಯಿಲೆಗಳಾದ ಕೆಮ್ಮು, ಶೀತ, ಜ್ವರ, ಭೇದಿ, ಹೊಟ್ಟೆ ನೋವು, ಸಕ್ಕರೆ ಕಾಯಿಲೆ, ಮೊಡವೆ ಮುಂತಾದ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಔಷಧಿಯ ಶಿಫಾರಸು ಹಾಗೂ ಅವುಗಳ ಸೇವನೆಯ ಬಗ್ಗೆ ದೂರವಾಣಿ ಮೂಲಕವೇ ಸಲಹೆಗಳನ್ನು ಪಡೆಯಲು ಈ ಯೋಜನೆ ನೆರವಾಗಿದೆ. ಸಾರ್ವಜನಿಕರು ರಾಜ್ಯದ ಯಾವುದೇ ಭಾಗದಿಂದ ಯಾವುದೇ ಶುಲ್ಕವಿಲ್ಲದೇ ತಮ್ಮ ದೂರವಾಣಿಯಿಂದ 104ಕ್ಕೆ ಕರೆಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಈ ಸೇವೆಯು ದಿನದ 24 ಗಂಟೆ ಹಾಗೂ ವರ್ಷದ 365 ದಿನಗಳೂ ಲಭ್ಯವಿರುತ್ತದೆ. ಸಾರ್ವಜನಿಕರ ಆರೋಗ್ಯ ಸುಧಾರಣೆ ದೃಷ್ಟಿಯಿಂದ ಸರ್ಕಾರ ಜಾರಿಗೆ ತಂದಿರುವ 104ರ ಆರೋಗ್ಯವಾಣಿ ಸೇವೆಯನ್ನು ಸಾರ್ವಜನಿಕರು ಬಳಸಿಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದು ಡಿಎಚ್ಓ ಡಾ. ಡಿ.ಬಿ. ಚನ್ನಶೆಟ್ಟಿ ಪ್ರಕಟಣೆಯ ಮೂಲಕ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement