ಇಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಸಭೆ
ಗದಗ: ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಸಭೆಯನ್ನು ನ. 30 ರಂದು ಬೆಳಗ್ಗೆ 11ಕ್ಕೆ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಆಯೋಜಿಸಲಾಗಿದೆ.
ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಶ್ರೀ ಉಗಲಾಟ ವಹಿಸುವರು. ಸಭೆಯಲ್ಲಿ ಚುನಾವಣೆಯಲ್ಲಿ ಮಹಿಳೆಯರ ಪಾತ್ರ ಹಾಗೂ ಮಹಿಳೆಯರಿಗೆ ಭದ್ರತೆ ಕುರಿತು ವಿಶೇಷ ಗೋಷ್ಠಿಗಳನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಳಕಪ್ಪ ಬಂಡಿ ಉದ್ಘಾಟಿಸುವರು. ಅತಿಥಿಗಳಾಗಿ ಸೀಮಾ ಮಸೂತಿ, ಗೀತಾ ಧನಂಜಯ, ಭಾರತಿ ಜಂಬಗಿ, ರಾಧಾಬಾಯಿ ಸಫಾರೆ, ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ಸಿ.ಸಿ. ಪಾಟೀಲ, ರಾಮಣ್ಣ ಲಮಾಣಿ, ವಂದನಾ ವರ್ಣೇಕರ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.