ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ: ಶೆಟ್ಟರ್

Vishwanath S
Updated On : 4 Oct 2013, 10:56 am

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆಯಲ್ಲಿ ಬಿಜೆಪಿ ಕಾರ್ಯಕರ್ತರ ಗುರಿಯಾಗಿಟ್ಟು ಪೊಲೀಸರು ಅಮಾಯಕರ ಮೇಲೆ ದೈಹಿಕ ಹಿಂಸೆ ಹಾಗೂ ದೌರ್ಜನ್ಯ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಕೋಮುಗಲಭೆಗಳು ಹೆಚ್ಚಾಗುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈಚೆಗೆ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯ ಪರಿಸ್ಥಿತಿ ಅವಲೋಕಿಸಲು ಆಗಮಿಸಿದ್ದು, ಘಟನೆಯಲ್ಲಿ ಅಮಾಯಕ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ವಿನಾಕಾರಣ ದೌರ್ಜನ್ಯ ಎಸಗ ಬಂಧಿಸಿದ್ದು ಸರಿಯಾದ ಕ್ರಮವಲ್ಲ. ಘಟನೆ ನಡೆಯಲು ಕಾರಣರಾದ ನಿಜವಾದ ಆರೋಪಿಗಳನ್ನು ಬಂಧಿಸದೆ ಇದ್ದದ್ದು ಗಲಭೆಯಾಗಲು ಕಾರಣವಾಗಿದೆ. ಪೊಲೀಸರು ಮುಂಜಾಗ್ರತಾ ಕ್ರಮವಾಗಿ 5ನೇ ದಿನದ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲದೇ ಬಿಜೆಪಿ ಕಾರ್ಯಕರ್ತರ ಗುರಿಯಾಗಿಟ್ಟುಕೊಂಡು ಅಮಾಯಕರನ್ನು ಬಂಧಿಸುವ ಕಾರ್ಯ ನಿಲ್ಲಬೇಕು. ಪೊಲೀಸರು ಇನ್ನೂ 10-15 ಜನರನ್ನು ಬಂಧಿಸುವುದಾಗಿ ಹೇಳಿಕೆ ನೀಡುತ್ತ ಸಾರ್ವಜನಿಕರಲ್ಲಿ ಭಯ ಹುಟ್ಟುವಂತೆ ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಅಲ್ಲದೆ ಮಾಹಿತಿ ಹಕ್ಕು ಹೋರಾಟಗಾರ ಸತೀಶ ಮೆಕ್ಕಿ ಎನ್ನುವ ಬಿಜೆಪಿ ಕಾರ್ಯಕರ್ತರ ಮನೆಗೆ ಹೋಗಿರುವ ಪೊಲೀಸರು ಅವರ ಮನೆಯವರ ಮೇಲೆ ಒತ್ತಡ ಹಾಕಿ ನಿಮ್ಮ ಹುಡುಗನನ್ನು ಪೊಲೀಸರಿಗೆ ಒಪ್ಪಿಸಿರಿ ಎನ್ನುವ ಹೇಳಿಕೆ ನೀಡುತ್ತಿರುವುದು ನಿಲ್ಲಬೇಕು. ಅಮಾಯಕರನ್ನು ಹಿಂಸಿಸುವ ಕಾರ್ಯವನ್ನು ಪೊಲೀಸರು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಬಿಜೆಪಿ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ. ಇಷ್ಟೆಲ್ಲ ಗಲಭೆಯಾದರೂ ಜಿಲ್ಲಾ ಉಸ್ತುವಾರಿ ಸಚಿವರು ಪಟ್ಟಣಕ್ಕೆ ಭೇಟಿ ನೀಡದಿರುವುದರ ಹಿಂದಿನ ಉದ್ದೇಶವಾದರು ಏನು ಎಂದು ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕಳಕಪ್ಪ ಬಂಡಿ, ಮಾಜಿ ಶಾಸಕರಾದ ಶ್ರೀಶೈಲಪ್ಪ ಬಿದರೂರ, ರಾಮಣ್ಣ ಲಮಾಣಿ, ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ, ಹೇಮಗಿರೀಶ ಹಾವಿನಾಳ, ಕಾಂತಿಲಾಲ ಬನ್ಸಾಲಿ, ನಾಗರಾಜ ಕುಲಕರ್ಣಿ, ತಾಪಂ ಮಾಜಿ ಅಧ್ಯಕ್ಷ ಜಾನು ಲಮಾಣಿ, ಚೆಂಬಣ್ಣ ಬಾಳಿಕಾಯಿ, ಸೋಮಣ್ಣ ಮುಳಗುಂದ, ಪುರಸಭೆ ಸದಸ್ಯ ರಾಮಣ್ಣ ರಿತ್ತಿ, ನಿರ್ಮಲಾ ಮೆಕ್ಕಿ, ಗಣೇಶ ಬೇವಿನಮರದ. ನಾಗರಾಜ ಚಿಂಚಲಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement