ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ವಿಷ ಉಣಿಸಿ ಮಕ್ಕಳ ಆತ್ಮಹತ್ಯೆ

Mainashree
Updated On : 4 Oct 2013, 12:45 pm

ಗಜೇಂದ್ರಗಡ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾದ ಹೃದಯ ವಿದ್ರಾವಕ ಘಟನೆ ಗುರುವಾರ ನಾಗರಸಕೊಪ್ಪ ಗ್ರಾಮದ ಹೊರ ವಲಯದ ತೋಟದ ಮನೆಯಲ್ಲಿ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಯಲ್ಲಪ್ಪ ಗುಜ್ಜಲ ಎಂಬುವವರ ಪತ್ನಿ ಯಲ್ಲಮ್ಮ ಗುಜ್ಜಲ(26) ತನ್ನ 3 ವರ್ಷದ ಗಂಡು ಮಗು ರವಿ ಹಾಗೂ 1 ವರ್ಷದ ಹೆಣ್ಣು ಮಗು ಪಾರ್ವತಿಗೆ ವಿಷ ಪ್ರಾಶನ ಮಾಡಿದ್ದಾಳೆ ಎನ್ನಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಗಂಡು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ವಿಷಯ ತಿಳಿದ ಗ್ರಾಮಸ್ಥರು ಅಸ್ವಸ್ಥಗೊಂಡ ತಾಯಿ ಯಲ್ಲಮ್ಮ ಹಾಗೂ ಹೆಣ್ಣು ಮಗು ಪಾರ್ವತಿಯನ್ನು ಗಜೇಂದ್ರಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಹೆಣ್ಣು ಮಗು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ. ತೀವ್ರ ಅಸ್ವಸ್ಥಳಾದ ತಾಯಿ ಯಲ್ಲಮ್ಮಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದ್ದು, ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement