ಕಾಲೇಜು ಪ್ರಾರಂಭಕ್ಕೆ ಅರ್ಜಿ ಆಹ್ವಾನ
ಗದಗ: ಪಪೂ ಶಿಕ್ಷಣ ನಿಯಮಗಳು 2006ರ ನಿಯಮ 4 ರನ್ವಯ 2014-15ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಖಾಸಗಿ ಅನುದಾನ ರಹಿತ ಪಪೂ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ, ಟ್ರಸ್ಟ್ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯಲ್ಲಿ ನ. 7ರ ನಂತರ ಹಾಗೂ ನ. 16ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಲು ಜಂಟಿ ನಿರ್ದೇಶಕರು ಪಪೂ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು ಇವರಿಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ವಿವರಗಳನ್ನು ಢಿಢಿಢಿ.ಠ್ಡಜ.್ಞಛ್ಠ.ಟ್ಝ್ಛಿ.್ಝಟಿ ಇಲ್ಲಿಂದ ಅಥವಾ ಪಪೂ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಕಲಾವಿದರಿಂದ ಅರ್ಜಿ ಆಹ್ವಾನ
ಗದಗ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲಾವಿದರನ್ನು ಉತ್ತೇಜಿಸುವ ದೃಷ್ಟಿಯಿಂದ ಅವರಿಗೆ ಅಗತ್ಯವಿರುವ ವಾದ್ಯಪರಿಕರ, ವೇಷಭೂಷಣ ಖರೀಧಿಸಿ ನೀಡಲು ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಪ್ರತಿ ತಾಲೂಕಿಗೆ 2 ತಂಡಗಳಿಗೆ ನೀಡಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಅ. 19 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಹುಬ್ಬಳ್ಳಿ ರಸ್ತೆ, ಗದಗ ದೂ. 08372-222186 ಇಲ್ಲಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ನಾಳೆ ಹಾಸ್ಟೆಲ್ ದಿನಗೂಲಿ ನೌಕರರ ಸಭೆ
ಗದಗ: ಅ. 7ರ ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿವೃತ್ತದ ಮುಖ್ಯ ಅಂಚೆ ಕಚೇರಿ ಹತ್ತಿರವಿರುವ ಸಿಐಟಿಯು ಕಚೇರಿಯಲ್ಲಿ ಹಾಸ್ಟೆಲ್ ದಿನಗೂಲಿ ನೌಕರರ ಜಿಲ್ಲಾಮಟ್ಟದ ಸಭೆ ನಡೆಯಲಿದೆ. ಹಾಸ್ಟೆಲ್ನ ದಿನಗೂಲಿ ನೌಕರರಿಗೆ ಕೆಲಸದ ಭದ್ರತೆ, ಕನಿಷ್ಠ ಕೂಲಿ ಇಲ್ಲದೇ ಕಷ್ಟದಿಂದ ದುಡಿಯುತ್ತಿದ್ದಾರೆ. ಇವರಿಗೆ ಮನೆ, ನಿವೇಶನ, ಪಡಿತರ ಚೀಟಿ, ಮತ್ತು ಮೂಲ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಈ ಸಭೆಗೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ನಿತ್ಯಾನಂದ ಸ್ವಾಮಿಯವರು ಆಗಮಿಸಲಿದ್ದು, ಹಾಸ್ಟೆಲ್ನ ಎಲ್ಲ ದಿನಗೂಲಿ ನೌಕರರು ತಪ್ಪದೇ ಸಭೆಯಲ್ಲಿ ಭಾಗವಹಿಸಬೇಕೆಂದು ಹಾಸ್ಟೆಲ್ ದಿನಗೂಲಿ ನೌಕರರ ಫೆಡರೇಷನ ಗದಗ ಜಿಲ್ಲಾ ಸಂಚಾಲಕ ಪೀರು ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದಿನಿಂದ ಎನ್ನೆಸ್ಸೆಸ್ ಶಿಬಿರ
ಗದಗ: ನಗರದ ಮುಳಗುಂದ ರಸ್ತೆಯಲ್ಲಿರುವ ಸರ್ಕಾರಿ ಪಪೂ ಕಾಲೇಜಿನ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಅ. 6 ರಿಂದ 12 ರವರೆಗೆ ಗದಗನ ಡಾ. ಎಸ್. ರಾಧಾಕೃಷ್ಣನ್ ನಗರದಲ್ಲಿ ಏರ್ಪಡಿಸಲಾಗಿದೆ. ಉದ್ಘಾಟನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೆರವೇರಿಸುವರು. ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಸ್. ಗೌಡರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಸರ್ಕಾರಿ ಪಪೂ ಕಾಲೇಜಿನ ಪ್ರಾ. ಬಿ.ಎಚ್. ಗರಡಿಮನಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಇಂದು ವನ್ಯ ಪ್ರಾಣಿ ಸಪ್ತಾಹ ದಿನಾಚರಣೆ
ಗದಗ: ಅರಣ್ಯ ಇಲಾಖೆಯಿಂದ 59ನೇ ವನ್ಯ ಪ್ರಾಣಿ ಸಪ್ತಾಹದ ಉದ್ಘಾಟನಾ ಸಮಾರಂಭವು ಅ. 6ರ ಬೆಳಗ್ಗೆ 9.30 ಗಂಟೆಗೆ ಹಾಗೂ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನಿಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಬಿಂಕದಕಟ್ಟಿಯ ಕಿರು ಮೃಗಾಲಯದ ಆವರಣ ಹಾಗೂ ಮಕ್ಕಳ ಉದ್ಯಾನವನದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಎಸ್ಪಿ ಡಾ. ಎಸ್.ಡಿ. ಶರಣಪ್ಪ, ಸಿಇಒ ವೀರಣ್ಣ ತುರಮರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜೀವ ನಾಯಕ ಮುಂತಾದವರು ಆಗಮಿಸಲಿದ್ದು, ಜಿಲ್ಲೆಯ ವನ್ಯಪ್ರಾಣಿ ಪರಿಪಾಲಕ ಸಿ.ಎಸ್. ಅರಸನಾಳ ಸ್ವಾಗತ ಕೋರಿದ್ದಾರೆ.
ಇಂದು ಸಲೀಂ ಅಹ್ಮದ್ ಪ್ರವಾಸ ಕಾರ್ಯಕ್ರಮ
ಗದಗ: ಕೇಂದ್ರ ಸರ್ಕಾರದ ನೆಹರು ಯುವ ಕೇಂದ್ರದ ಮಹಾನಿರ್ದೇಶಕ ಸಲೀಂ ಅಹ್ಮದ್ ಅ. 6 ಮುಳಗುಂದಕ್ಕೆ ಆಗಮಿಸಿ ಬೆಳಗ್ಗೆ 10 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮುಳಗುಂದದಿಂದ ಲಕ್ಷ್ಮೇಶ್ವರಕ್ಕೆ ಆಗಮಿಸಿ ಮಧ್ಯಾಹ್ನ 12 ಗಂಟೆಗೆ ಅಲ್ಲಿನ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಹಾನಗಲ್ಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.