ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಇಂದು ಉಪನ್ಯಾಸ

Lingaraj Badiger
Updated On : 26 Oct 2013, 10:51 am

ಗದಗ: ಗದಗ ಜಿಲ್ಲಾ ಕಸಾಪ ವತಿಯಿಂದ ಶನಿವಾರ ಸಾಹಿತ್ಯ ಸಂಜೆ ಉಪನ್ಯಾಸ ಅ. 26ರಂದು ಸಂಜೆ 6 ಗಂಟೆಗೆ ತಾಪಂ ಆವರಣದಲ್ಲಿರುವ ಜಿಲ್ಲಾ ಕಸಾಪ ಕಚೇರಿಯಲ್ಲಿ ನಡೆಯಲಿದೆ. ಕೆವಿಎಸ್‌ಆರ್ ಕಾಲೇಜಿನ ಪ್ರಾಚಾರ್ಯ ಬಿ.ಆರ್.ಜಾಲಿಹಾಳ ಅವರು ಕರ್ನಾಟಕ ಏಕೀಕರಣ ಕುರಿತು ಉಪನ್ಯಾಸ ನೀಡಲಿದ್ದಾರೆ. ಸೀಮಾ ಪಾವಸ್ಕರ ಕವನ ವಾಚನ ಮಾಡಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಗದುಗಿನ ಸಾಹಿತಿಗಳು, ಕಲಾವಿದರು, ಕಸಾಪ ಆಜೀವ ಸದಸ್ಯರು, ಕನ್ನಡಾಭಿಮಾನಿಗಳು, ಶಾಲಾಕಾಲೇಜುಗಳ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶರಣು ಗೋಗೇರಿ, ಡಾ. ಸಂಗಮೇಶ ತಮ್ಮನಗೌಡರ ಹಾಗೂ ಕೋಶಾಧ್ಯಕ್ಷ ಮಲ್ಲೇಶ ಡಿ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆ ಕೊಲೆ
ರೋಣ: ತಾಲೂಕಿನ ಶಾಂತಗೇರಿ ಗ್ರಾಮದಲ್ಲಿ ಆಡು ಮೇಯಿಸಲು ತೆರಳಿದ್ದ ಮಹಿಳೆಯೋರ್ವಳು ಕೊಲೆಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶಾಂತವ್ವ ಹನಮಂತಪ್ಪ ಜಾಡರ ಊರ್ಫ್ ಪದ್ಮಸಾಲಿ (65) ಎಂದು ಗುರುತಿಸಲಾಗಿದೆ. ಕೊಲೆಗೆ ಯಾವುದೇ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಮಹಿಳೆಯ ಶವದ ತಲೆ ಹಾಗೂ ಕುತ್ತಿಗೆ ಭಾಗದಲ್ಲಿ ಗಂಭೀರವಾದ ಗಾಯಗಳಾಗಿರುವುದು ಪತ್ತೆಯಾಗಿದೆ ಎಂದು ಪಿಎಸ್‌ಐ ಡಿ.ಬಿ. ಪಾಟೀಲ ತಿಳಿಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement