ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಗದಗ ಎಪಿಎಂಸಿಗೆ 70 ವರ್ಷ

Lingaraj Badiger
Updated On : 26 Oct 2013, 10:50 am

ಕನ್ನಡಪ್ರಭ ವಾರ್ತೆ, ಗದಗ, ಅ. 25
ಗದಗ ಎಪಿಎಂಸಿಗೆ 70 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಅ. 28 ರಂದು ಸಿಎಂ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಗದಗ ಎಪಿಎಂಸಿ ಅಧ್ಯಕ್ಷ ಡಿ.ಆರ್.ಪಾಟೀಲ ತಿಳಿಸಿದರು.
ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 11 ಗಂಟೆಗೆ ನಗರದ ಎಪಿಎಂಸಿ ಪ್ರಾಂಗಣದಲ್ಲಿರುವ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಾರುಕಟ್ಟೆ ಸ್ಥಾಪನೆಗೊಂಡು ಎಪ್ಪತ್ತು ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಎಪಿಎಂಸಿಯ ಪ್ರಥಮ ಅಧ್ಯಕ್ಷ, ರಾವಬಹಾದ್ದೂರ ಫಕೀರಪ್ಪ ಲಕ್ಷ್ಮೇಶ್ವರ ಹಾಗೂ ಮಾರುಕಟ್ಟೆಯನ್ನು ರೈತ ಪರಗೊಳಿಸಿದ ಕೆ.ಎಚ್. ಪಾಟೀಲರ ಪುತ್ಥಳಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾವರಣಗೊಳಿಸಲಿದ್ದಾರೆ.
ಗ್ರಾಮೀಣಾಭಿವೃದ್ಧಿ, ಪಂಚಾಯತರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು. ಎಪಿಎಂಸಿ ಪ್ರಾಂಗಣದಲ್ಲಿರುವ ಅತಿಥಿ ಗೃಹದ ಶಿಲಾನ್ಯಾಸವನ್ನು ಕೃಷಿ ಮಾರುಕಟ್ಟೆ ಸಚಿವ ಶಾಮನೂರ ಶಿವಶಂಕ್ರಪ್ಪ ಹಾಗೂ ಸಪ್ತಪರ್ವ ಸ್ಮರಣ ಸಂಚಿಕೆಯನ್ನು ಕೃಷಿ ರಾಜ್ಯ ಸಚಿವ ಕೃಷ್ಣ ಬೈರೇಗೌಡ ಬಿಡುಗಡೆಗೊಳಿಸುವರು.
ಸಂಸದ ಪಿ.ಸಿ. ಗದ್ದಿಗೌಡರ, ಶಿವಕುಮಾರ ಉದಾಸಿ, ಶಾಸಕರಾದ ಬಿ.ಆರ್. ಯಾವಗಲ್ಲ, ಜಿ.ಎಸ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ವಿಪ ಸದಸ್ಯ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ನಾಗರಾಜ ಛಬ್ಬಿ, ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ಗದಗ ತಾಪಂ ಅಧ್ಯಕ್ಷ ಹನುಮಪ್ಪ ಇಂಗಳಹಳ್ಳಿ, ಉಪಾಧ್ಯಕ್ಷೆ ಪ್ರತಿಭಾ ಸಿದ್ದರಾಮಣ್ಣವರ, ರಾಜ್ಯ ಕೃಷಿ ಮಾರಾಟ ಮಂಡಳಿ ಸದಸ್ಯ ಹಾಗೂ ಮುಂಡರಗಿ ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ಬೆಂಗಳೂರಿನ ಕರಾಕೃಮಾ ಉಪಾಧ್ಯಕ್ಷ ಪಿ.ಎಸ್. ವೀರೇಂದ್ರ ಪ್ರಸಾದ, ಬೆಂಗಳೂರಿನ ಸಹಕಾರ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಜಿ.ವಿ. ಕೃಷ್ಣರಾವ್, ಗದಗ ಎಪಿಎಂಸಿ ಮಾಜಿ ಅಧ್ಯಕ್ಷ ವಿ.ವಿ. ಜೋಶಿ, ಬೆಂಗಳೂರಿನ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಪಿ.ಎಸ್. ವಸ್ತ್ರದ ಸೇರಿದಂತೆ ಇತರರು ಆಗಮಿಸುವರು ಎಂದರು. ಎಪಿಎಂಸಿ ಉಪಾಧ್ಯಕ್ಷ ಸಿದ್ದಲಿಂಗೇಶಗೌಡ ಪಾಟೀಲ, ಕಾರ್ಯದರ್ಶಿ ಎಂ. ನಂಜುಂಡಸ್ವಾಮಿ, ಅಶೋಕ ಮಂದಾಲಿ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement