ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕಳಸಾ-ಬಂಡೂರಿ ಕಾಮಗಾರಿ ವಿಳಂಬ ಖಂಡಿಸಿ ನಾಳೆ ಧರಣಿ

Rashmi Kasaragodu
Updated On : 27 Oct 2013, 1:05 am

ನರಗುಂದ: ರಾಜ್ಯದ ಉತ್ತರ ಕರ್ನಾಟಕದ 4 ಜಿಲ್ಲೆ ಮತ್ತು 9 ತಾಲೂಕಿಗೆ ಕುಡಿಯುವ ನೀರಿಗೆ ಮಲಪ್ರಭಾ ಜಲಾಶಯಕ್ಕೆ ಕಳಸಾ-ಬಂಡೂರಿ ನಾಲಾಗಳನ್ನು ಜೋಡಿಸಬೇಕೆಂದು ಈ ಭಾಗದ ಜನತೆ ಬಹು ದಿನಗಳಿಂದ ಹೋರಾಟ ನಡೆಸಿದರೂ ಈ ಕಾಮಗಾರಿ ಅಪೂರ್ಣವಾಗಿದ್ದರಿಂದ ಅ. 28ರಂದು ಸಾಂಕೇತಿಕ ಧರಣಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಹೇಳಿದರು. ಅವರು ಶನಿವಾರ ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದ ಸಭಾಮಂಟದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಬರಲಿದ್ದು, ಈ ಸಂದರ್ಭದಲ್ಲಿ ಪಟ್ಟಣದ ಕಿತ್ತೂರು ಚನ್ನಮ್ಮ ವೃತ್ತದಿಂದ ಕಳಾಸಾ ಬಂಡೂರಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಸಾಂಕೇತಿಕ ಧರಣಿ ಸ್ಥಳಕ್ಕೆ ಬಂದು, ಈ ಕಾಮಗಾರಿ ಸ್ಥಳಕ್ಕೆ ಆಗಮಿಸಿದ ಸಿಎಂಗೆ ಮನವಿ ಸಲ್ಲಿಸಲಾಗುವುದು ಎಂದರು. ಚಳಪ್ಪ ನಾಯ್ಕರ, ಎಸ್.ಆರ್. ಮಠದ, ಎಚ್.ಬಿ. ಹೆಬ್ಬಳ್ಳಿ, ಕೆ.ವೈ.ಬಿಕ್ಕಣ್ಣವರ ಮುಂತಾದವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement