ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕೊಳಚೆ ನಿವಾಸಿಗಳಿಗೆ ಹಕ್ಕುಪತ್ರ ವಿಳಂಬ: ಉಗ್ರ ಹೋರಾಟದ ಎಚ್ಚರಿಕೆ

Rashmi Kasaragodu
Updated On : 27 Oct 2013, 1:04 am

ಕನ್ನಡಪ್ರಭ ವಾರ್ತೆ, ಗದಗ, ಅ. 26
ರಾಜ್ಯ ಸರ್ಕಾರದ ಆದೇಶದಂತೆ ಗದಗ-ಬೆಟಗೇರಿ ನಗರದ ಸ್ಲಂ ಪ್ರದೇಶಗಳ ಸಮೀಕ್ಷೆ ನಡೆಸಿ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಬೇಕೆಂದು ಆದೇಶವಿದ್ದರೂ ಸಹ ಸ್ಲಂ ಬೋರ್ಡ್ ಅಧಿಕಾರಿಗಳು ವಿನಾಕಾರಣ ವಿಳಂಬ ಮಾಡುತ್ತಿದ್ದು ತಕ್ಷಣ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೀಡದೇ ಇದ್ದಲ್ಲಿ ಸ್ಲಂ ಬೋರ್ಡ್ ಕಚೇರಿಯ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ ಮಾನ್ವಿ ಆಗ್ರಹಿಸಿದ್ದಾರೆ.
ಅವರು ನಗರದಲ್ಲಿ ಶುಕ್ರವಾರ ಜರುಗಿದ ಸ್ಲಂ ಸಮಿತಿ ಪದಾಧಿಕಾರಿಗಳ ಹಾಗೂ ಸ್ಲಂ ನಿವಾಸಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ  ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸ್ಲಂ ಪ್ರದೇಶಗಳ ಸಮೀಕ್ಷೆ ಕಾರ್ಯ ನಡೆಸಿ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಬೇಕೆಂದು ಆದೇಶ ಪ್ರತಿಯನ್ನು ಪ್ರತಿ ಜಿಲ್ಲಾ ಕೇಂದ್ರದ ಸ್ಲಂ ಬೋರ್ಡ್ ಕಚೇರಿಗಳಿಗೆ ಕಳಿಹಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಸಮೀಕ್ಷೆ ಕಾರ್ಯ ನಡೆಸಿ ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುತ್ತಿದೆ. ಆದರೆ ಗದಗ-ಬೆಟಗೇರಿ ನಗರದ ಸ್ಲಂ ನಿವಾಸಿಗಳಿಗೆ ಸ್ಲಂ ಬೋರ್ಡ್ ಅಧಿಕಾರಿಗಳು ಹಕ್ಕುಪತ್ರಗಳನ್ನು ನೀಡಲು ವಿಳಂಬ ಮಾಡುತ್ತಿರುವುದು ಖಂಡನೀಯ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಸರ್ಕಾರದ ಆದೇಶದಂತೆ ನಗರದ ಎಲ್ಲ ಸ್ಲಂ ಪ್ರದೇಶದ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಿಸುವ ಕಾರ್ಯ ನಡೆಸಬೇಕು. ಇಲ್ಲವಾದಲ್ಲಿ ಸಮಿತಿಯಿಂದ ಹೋರಾಟ ನಡೆಸಲಾಗುವುದು ಎಂದರು.
ಸ್ಲಂ ಮಹಿಳಾ ಸಮಿತಿ ಅಧ್ಯಕ್ಷೆ ಉಮಾದೇವಿ ಕಾತರಕಿ ಹಾಗೂ ಸಮಿತಿ ಕಾರ್ಯದರ್ಶಿ ತಿಪ್ಪವ್ವ ಮುಟಗಾರ ಮಾತನಾಡಿದರು. ಸಭೆಯಲ್ಲಿ ಸ್ಲಂ ಸಮಿತಿಯ ಅಧ್ಯಕ್ಷ ಅಶೋಕ ಮ್ಯಾಗೇರಿ, ಉಪಾಧ್ಯಕ್ಷ ಅಶೋಕ ಕುಡತಿನ್ನಿ, ಯುವ ಸಮಿತಿ ಅಧ್ಯಕ್ಷ ಶರೀಫ ಬಿಳೆಯಲಿ, ಉಪಾಧ್ಯಕ್ಷ ಯಲ್ಲಪ್ಪ ರಾಮಗಿರಿ, ದ್ಯಾಮಣ್ಣ ಡೋಣಿ, ಶಹಜಾನಬಿ ಕರ್ನಾಚಿ, ಅಶೋಕ ಕುಸಬಿ, ಗೌರಮ್ಮ ಶಿರಗುಪ್ಪಿ, ತಾಹೇರಾಬೇಗಂ ಗುಳಗುಂದಿ, ಕಮಲವ್ವ ಬಿದರೂರ, ಪರಶುರಾಮ ಕಾಳೆ, ರಾಜು ಕಣಗಿನಹಾಳ, ಅನಿಲ ಕಾಳೆ, ಬಸವರಾಜ ಬಿಳೆಯಲಿ, ನವೀನ ಬಣಕಾರ ಹಾಗೂ ನಗರದ ವಿವಿಧ ಕೊಳಚೆ ಪ್ರದೇಶಗಳಿಂದ ನೂರಾರು ಸ್ಲಂ ನಿವಾಸಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement