ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಇಂದು ಗದಗ ಎಪಿಎಂಸಿ 70ನೇ ವರ್ಷಾಚರಣೆ

Lingaraj Badiger
Updated On : 28 Oct 2013, 11:12 am

ಗದಗ:  ಅ. 28ರಂದು ಬೆಳಗ್ಗೆ 11 ಗಂಟೆಗೆ ನಗರದ ಎಪಿಎಂಸಿಯ ವಿವೇಕಾನಂದ ಸಭಾಂಗಣದಲ್ಲಿ ಜರುಗುವ ಗದಗ ಕೃಷಿ ಮಾರುಕಟ್ಟೆಯ 70ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳುವರು. ಮಾರುಕಟ್ಟೆಯ ಪ್ರಥಮ ಅಧ್ಯಕ್ಷರಾಗಿದ್ದ ಫಕೀರಪ್ಪ ಲಕ್ಷ್ಮೇಶ್ವರ ಹಾಗೂ ಮಾಜಿ ಸಚಿವ ಕೆ.ಎಚ್. ಪಾಟೀಲ ಅವರುಗಳ ಪುತ್ಥಳಿಗಳನ್ನು ಮುಖ್ಯಮಂತ್ರಿಗಳು ಅನಾವರಣ ಮಾಡುವರು. ಗ್ರಾಮೀಣಾಭಿವೃದ್ಧಿ  ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು. ಕೃಷಿ ಮಾರುಕಟ್ಟೆ ಹಾಗೂ ತೋಟಗಾರಿಕೆ ಸಚಿವ ಶಾಮನೂರ ಶಿವಶಂಕರಪ್ಪನವರು ಅತಿಥಿಗೃಹದ ಶಂಕುಸ್ಥಾಪನೆ ಮಾಡಲಿದ್ದು, ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಪಂ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಕೃಷಿ ಮಾರುಕಟ್ಟೆ ಮಂಡಳಿಯ ಪದಾಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement