ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ನಾಳೆ ಬಿಜೆಪಿ ಪ್ರತಿಭಟನೆ

Lingaraj Badiger
Updated On : 28 Oct 2013, 11:21 am

ಗದಗ:  ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯಿಂದ ರೈತರು ಕಂಗಾಲಾಗಿದ್ದು, ರೈತರಿಗೆ ಬೆಳೆವಿಮೆ, ಸಾಲಮನ್ನಾ ಮರುಪಾವತಿ, ನಕಲಿ ಬೀಜ ಕಂಪನಿಗಳ ವಿರುದ್ಧ ಕ್ರಮ ಹಾಗೂ ರಸಗೊಬ್ಬರ ದರ ಏರಿಕೆ ಖಂಡಿಸಿ ಅ. 29ರಂದು ಬೆಳಗ್ಗೆ 11 ಗಂಟೆಗೆ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ರೈತ ಮೋರ್ಚಾದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಳಕಪ್ಪ  ಬಂಡಿ ಪ್ರತಿಭಟನೆಯ ನೇತೃತ್ವ ವಹಿಸುವರೆಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಸವಣ್ಣೆಪ್ಪ ಚಿಂಚಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಕೆನರಾ ಬ್ಯಾಂಕ್‌ನ ಶಾಖೆ ಉದ್ಘಾಟನೆ
ಲಕ್ಷ್ಮೇಶ್ವರ:  ಪಟ್ಟಣದ ಪಂಪ ವೃತ್ತದ ಹತ್ತಿರದ ಸಿಂಧೂರ ಮಳಿಗೆಯಲ್ಲಿ ಅ. 28ರಂದು ಬೆಳಗ್ಗೆ 9.30 ಗಂಟೆಗೆ ಕೆನರಾ ಬ್ಯಾಂಕ್‌ನ ಶಾಖೆಯ ಉದ್ಘಾಟನೆ ಜರುಗಲಿದ್ದು, ಮುಕ್ತಿಮಂದಿರ ಧರ್ಮಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸಾನ್ನಿಧ್ಯ ವಹಿಸುವರು. ಎಸ್.ಡಿ. ಬಿರಾದಾರ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಆಗಮಿಸುವರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement