ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಇಂದು ರಾಜ್ಯೋತ್ಸವ

Lingaraj Badiger
Updated On : 1 Nov 2013, 11:11 am

ಗದಗ:  58ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ. 1 ರಂದು ತಾಯಿ ಭುವನೇಶ್ವರಿಯ ಪೂಜೆ ಹಾಗೂ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೆರವೇರಿಸುವರು. ಅತಿಥಿಗಳಾಗಿ ಸಂಸದರು, ಶಾಸಕರು, ಜಿಪಂ ಉಪಾಧ್ಯಕ್ಷರು, ತಾಪಂ ಅಧ್ಯಕ್ಷ, ಉಪಾಧ್ಯಕ್ಷರು ಆಗಮಿಸುವರು. ಬೆಳಗ್ಗೆ 7.30 ಗಂಟೆಗೆ ನಗರಸಭೆ ಕಾಲೇಜು ಮೈದಾನದಲ್ಲಿ ತಾಯಿ ಭುವನೇಶ್ವರಿ ಪೂಜೆ ನೆರವೇರುವುದು. ನಂತರ 9.30 ಗಂಟೆಗೆ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಜರುಗುವುದು. ಸಂಜೆ 5.30 ಗಂಟೆಗೆ ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ, ಸಿಇಒ ವಿ.ಜಿ. ತುರಮರಿ, ಎಸ್ಪಿ ಡಾ. ಎಸ್.ಡಿ. ಶರಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯೋತ್ಸವ
ಗದಗ: ಅಖಿಲ ಕರ್ನಾಟಕ ವೀರರಾಣಿ ಕಿತ್ತೂರ ಚನ್ನಮ್ಮ ಸರ್ವಧರ್ಮ ಸಮಾಜ ಸೇವಾಸಂಸ್ಥೆ ಗದಗ ವೀರಶೈವ, ಲಿಂಗಾಯತ ಪಂಚಮಸಾಲಿ ಸಮಾಜದಿಂದ ಭಾನುವಾರ ಏರ್ಪಡಿಸಿದ್ದ ವೀರರಾಣಿ ಕಿತ್ತೂರ ಚೆನ್ನಮ್ಮ ವಿಜಯೋತ್ಸವದ ಸಂದರ್ಭದಲ್ಲಿ ನಗರದ ಚನ್ನಮ್ಮ ಕಂಚಿನ ಪುತ್ಥಳಿಗೆ ಮಾಜಿ ಶಾಸಕ ಡಿ.ಆರ್. ಪಾಟೀಲರು ವಿಶೇಷ ಪೂಜೆ ಸಲ್ಲಿಸಿದರು.

ಇಂದು ಪುಣ್ಯಾರಾಧನೆ, ಕವನ ಸಂಕಲನ ಬಿಡುಗಡೆ
ಗದಗ: ದಿ. ಎ.ಎಚ್. ಪಾಟೀಲ (ಹಾಲಕೇರೆ) ವಕೀಲರ ತೃತೀಯ ಪುಣ್ಯಾರಾಧನೆ ಮತ್ತು ಅವರು ಬರೆದ ಕವನ ಸಂಕಲನ ಸಂತರ್ಪಣೆ ಕೃತಿಯನ್ನು ಡಾ. ತೋಂಟದ ಸಿದ್ದಲಿಂಗ ಶ್ರೀಗಳು ನ. 1ರ ಬೆಳಗ್ಗೆ 11.30 ಗಂಟೆಗೆ ನಗರದ ಪ್ರಭುರಾಜೇಂದ್ರ ಶಾರೀರಿಕ ಮಹಾವಿದ್ಯಾಲಯದಲ್ಲಿ ಬಿಡುಗಡೆ ಮಾಡಲಿದ್ದಾರೆ. ಫಕೀರಸಿದ್ದರಾಮ ಶ್ರೀ, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಸಾನ್ನಿಧ್ಯ ವಹಿಸುವರು. ಅತಿಥಿಗಳಾಗಿ ಸಚಿವ ಎಚ್.ಕೆ. ಪಾಟೀಲ, ಶಾಸಕ ಜಿ.ಎಸ್. ಪಾಟೀಲ ಉಪಸ್ಥಿತರಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement