ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಇಂದು ಶಿಕ್ಷಕರ ದಿನಾಚರಣೆ

Vishwanath S
Updated On : 5 Sept 2013, 11:07 am

ಮುಂಡರಗಿ: ಜಿಪಂ ಗದಗ, ತಾಪಂ ಮುಂಡರಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮುಂಡರಗಿ ಮತ್ತು ಶಿಕ್ಷಕರ ದಿನಾಚರಣೆಯ ಸಮಿತಿ ಮುಂಡರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ. 5ರಂದು ಡಾ. ಎಸ್.ರಾಧಾಕೃಷ್ಣನ್ ಜನ್ಮದಿನೋತ್ಸವ ನಿಮಿತ್ತ ಶಿಕ್ಷಕರ ದಿನ ಆಚರಿಸಲಾಗುವುದು. ಈ ಕಾರ್ಯಕ್ರಮದ ಅಂಗವಾಗಿ ಸೆ. 5ರಂದು ಬೆಳಗ್ಗೆ 11 ಗಂಟೆಗೆ ಡಾ. ಎಸ್.ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆಯು ಪಟ್ಟಣದ ಶಿರಹಟ್ಟಿ ರಸ್ಥೆಯಲ್ಲಿರುವ ಗಣೇಶ ದೇವಸ್ಥಾನದಿಂದ ಪ್ರಾರಂಭವಾಗಲಿದ್ದು, ಮೆರವಣಿಗೆಯ ಉದ್ಘಾಟನೆಯನ್ನು ಜ. ನಾಡೋಜ ಡಾ. ಅನ್ನದಾನೀಶ್ವರ ಶ್ರೀಗಳು ನೆರವೇರಿಸುವರು. ನಂತರ ಮಧ್ಯಾಹ್ನ 2-30 ಗಂಟೆಗೆ ಸ್ಥಳೀಯ ಜ. ತೋಂಟದಾರ್ಯ ಮಠದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಾನ್ನಿಧ್ಯವನ್ನು ಜ. ತೋಂಟದ ಡಾ. ಸಿದ್ಧಲಿಂಗ ಶ್ರೀಗಳು ವಹಿಸುವರು. ಉದ್ಘಾಟನೆಯನ್ನು ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ ನೆರವೇರಿಸುವರು. ಅಧ್ಯಕ್ಷತೆಯನ್ನು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ವಹಿಸುವರು. ಅತಿಥಿಗಳಾಗಿ ಜಿ.ಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಸಂಸದ ಶಿವಕುಮಾರ ಉದಾಸಿ, ವಿಪ ಸದಸ್ಯ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ನಾಗರಾಜ ಛಬ್ಬಿ, ತಾ.ಪಂ. ಅಧ್ಯಕ್ಷೆ ತಾರಾಬಾಯಿ ಚವ್ಹಾಣ, ಉಪಾಧ್ಯಕ್ಷೆ ಅಕ್ಕಮಹಾದೇವಿ ಹಾರೋಗೇರಿ, ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ಜಿ.ಪಂ ಸದಸ್ಯೆ ಕಸ್ತೂರೆವ್ವ ಪಾಟೀಲ, ಬೀರಪ್ಪ ಬಂಡಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯುವುದು.
ರೋಣ: ಇಂದು ಶಿಕ್ಷಕರ ದಿನಾಚರಣೆ
ರೋಣ:  ಜಿ.ಪಂ. ಗದಗ, ತಾಪಂ ರೋಣ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ರೋಣ ಮತ್ತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘ ಸಂಯುಕ್ತವಾಗಿ ಡಾ. ಎಸ್.ರಾಧಾಕೃಷ್ಣನ್‌ರವರ 125ನೇ ಜನ್ಮ ದಿನಾಚರಣೆ ಅಂಗವಾಗಿ ಸೆ. 5ರಂದು ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಸಮಾರಂಭದ ಉದ್ಘಾಟನೆಯನ್ನು ಶಾಸಕ ಜಿ.ಎಸ್.ಪಾಟೀಲ ನೆರವೇರಿಸುವರು. ಸಾನ್ನಿಧ್ಯವನ್ನು ಗುಲಗಂಜಿಮಠದ ಗುರುಪಾದ ಶ್ರೀಗಳು ವಹಿಸುವರು. ಅಧ್ಯಕ್ಷತೆಯನ್ನು ರಾಜ್ಯ ಬೀಜ ನಿಗಮದ ನಿರ್ದೇಶಕ ಐ.ಎಸ್.ಪಾಟೀಲ ವಹಿಸುವರು. ಅತಿಥಿಗಳಾಗಿ ನರಗುಂದ ಶಾಸಕ ಬಿ.ಆರ್.ಯಾವಗಲ್, ಜಿ.ಪಂ. ಅದ್ಯಕ್ಷ ಎಂ.ಎಸ್.ಪಾಟೀಲ, ಉಪಾಧ್ಯಕ್ಷ ರಮೇಶ ಮುಂದಿನಮನಿ, ಜಿ.ಪಂ ಸದಸ್ಯ ಡಾ. ಆರ್.ಬಿ. ಬಸವರಡ್ಡೇರ, ಶಕುಂತಲಾ ಗಾಣಿಗೇರ, ಶಾರದಾ ಹಿರೇಗೌಡ್ರ, ರಾಜೇಶ್ವರಿ ಪಾಟೀಲ, ತಾ.ಪಂ. ಅಧ್ಯಕ್ಷೆ ಲಲಿತಾ ಪೂಜಾರ, ಉಪಾಧ್ಯಕ್ಷೆ ರುದ್ದವ್ವ ತಾಳಿ, ವಿ.ಆರ್. ಗುಡಿಸಾಗರ, ದಶರಥ ಗಾಣಿಗೇರ, ಎನ್.ಎಸ್. ಕೆಂಗಾರ, ನಿಂಗಪ್ಪ ಬೇವಿನಮರದ, ಮಿಥುನ್ ಪಾಟೀಲ, ಪ್ರಭು ಮೇಟಿ, ವಿಶ್ವನಾಥ ಜಿಡ್ಡಿಬಾಗೀಲ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಡಾ. ಶರಣಬಸವ ವೆಂಕಟಾಪುರ ಇವರಿಂದ ಉಪನ್ಯಾಸ ಜರುಗಲಿದೆ ಎಂದು ಬಿಇಓ ಕೆ.ವಿ.ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಭ್ರಮದಿಂದ ಜರುಗಿದ ರಥೋತ್ಸವ
ಮುಂಡರಗಿ:  ಸ್ಥಳೀಯ ಕೋಟೆ ಭಾಗದಲ್ಲಿರುವ ಮೂಲಪುರುಷ ಜ. ಅನ್ನದಾನೀಶ್ವರರ ಶ್ರೀಗಳ ಮಹಾ ರಥೋತ್ಸವವು ಸಂಭ್ರಮದಿಂದ ಜರುಗಿತು. ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳವರು ಮಹಾರಥೋತ್ಸವಕ್ಕೆ ಚಾಲನೆ ನೀಡಿದರು. ಮಹಾರಥೋತ್ಸವ ಕಾರ್ಯಕ್ರಮದಲ್ಲಿ ಚಂದ್ರಶೇಖರ ಬಡಿಗೇರ, ಈರಣ್ಣ ಗಡಾದ, ಶಿವಪುತ್ರಪ್ಪ ಬೆಣಕನಾಳ, ಮುದಕಪ್ಪ ಬೆಟಗೇರಿ, ಬಸಪ್ಪ ಬಳ್ಳಾರಿ, ಈರಣ್ಣ ಬೇವಿನಮರದ, ಕನಕಪ್ಪ ಕುರಿ, ಕನಕಪ್ಪ ಕಾತರಕಿ, ಎಚ್.ಎಂ. ಕುರಿ, ಈಶಪ್ಪ ಉಪ್ಪಿನಬೆಟಗೇರಿ, ನಿಂಗಪ್ಪ ಕುರಿ, ಮಂಜುನಾಥ ಇಟಗಿ ಮುಂತಾದವರು ಭಾಗವಹಿಸಿದ್ದರು.
ಇಂದು ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ
ಗದಗ:  ಜಿಪಂ ಗದಗ, ಉಪನಿರ್ದೇಶಕರ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗದಗ ಶಹರ ಮತ್ತು ಗ್ರಾಮೀಣ ವಲಯ ಸಂಯುಕ್ತವಾಗಿ 2013-14ನೇ ಸಾಲಿನ ಡಾ. ಎಸ್. ರಾಧಾಕೃಷ್ಣನ್‌ರವರ ಜನ್ಮ ದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರ ಸನ್ಮಾನ, ಜಿಲ್ಲಾ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ. 5ರ ಬೆಳಗ್ಗೆ 10.30ಕ್ಕೆ ನಗರದ ಎಪಿಎಂಸಿ ಯಾರ್ಡನಲ್ಲಿರುವ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಸಾನ್ನಿಧ್ಯವನ್ನು ಹೊಸಳ್ಳಿಯ ಅಭಿನವ ಬೂದೀಶ್ವರ ಸಂಸ್ಥಾನ ಮಠದ ಅಭಿನವ ಬೂದೀಶ್ವರ ಶ್ರೀಗಳು ವಹಿಸುವರು. ಉದ್ಘಾಟನೆಯನ್ನು  ಸಚಿವ ಎಚ್.ಕೆ.ಪಾಟೀಲ ನೆರವೇರಿಸುವರು.  ಗದಗ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ, ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ಗುಡ್ಲಾನೂರ, ಗದಗ ಡಯಟ್‌ನ ಉಪನಿರ್ದೇಶಕ ಬಿ.ಎಸ್. ರಘುವೀರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಜೀವ ನಾಯಕ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ರಥೋತ್ಸವ  
ನರೇಗಲ್ಲ:  ಸಮೀಪದ ಅಬ್ಬಿಗೇರಿಯ ಹೊರವಲಯದಲ್ಲಿರುವ ಕಂಠಿಬಸವೇಶ್ವರ ಜಾತ್ರೆಯ ನಿಮಿತ್ತ ಶ್ರಾವಣಮಾಸದ ಕೊನೆಯ ಸೋಮವಾರ ವಿಜೃಂಭಣೆಯ ರಥೋತ್ಸವ ಜರುಗಿತು. ರೈತರ ಜಾತ್ರೆ ಎಂದೇ ಪ್ರಸಿದ್ಧವಾಗಿರುವ ಜಾತ್ರೆಯ ಅಂಗವಾಗಿ ಅಬ್ಬಿಗೇರಿಯಿಂದ ಕಳಸ ಹಾಗೂ ಹಗ್ಗವನ್ನು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ಸಕಲ ವಾದ್ಯಮೇಳಗಳೊಂದಿಗೆ ಊರ ಹೊರ ವಲಯದಲ್ಲಿರುವ ಜಾಗೃತ ಬಸವೇಶ್ವರ ದೇವಸ್ಥಾನಕ್ಕೆ ತರಲಾಯಿತು.
ಇಂದು ಅಹವಾಲು ಸ್ವೀಕಾರ
ಗದಗ:  ಜಿಲ್ಲೆಯ ಮಾಜಿ ಸೈನಿಕರ, ಮಾಜಿ ಸೈನಿಕರ ಅವಲಂಬಿತರ ಕುಂದುಕೊರತೆಗಳನ್ನು ವಿಚಾರಿಸಲು, ಅಹವಾಲುಗಳನ್ನು ಸ್ವೀಕರಿಸಲು ಹಾಗೂ ಶಿಷ್ಯವೇತನದ, ಪುಸ್ತಕ ಅನುದಾನದ ಅರ್ಜಿಗಳನ್ನು ವಿತರಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಸಿಬ್ಬಂದಿ ಸೆ. 5ರಂದು ಗದಗ ನಗರಕ್ಕೆ ಭೇಟಿ ನೀಡಲಿದ್ದಾರೆ. ಆ ದಿನ ಮಾಜಿ ಸೈನಿಕರ, ಮಾಜಿ ಸೈನಿಕರ ಅವಲಂಬಿತರು ತಮ್ಮ ಮೂಲ ಸೇನಾ ದಾಖಲೆಗಳು ಹಾಗೂ ಇಲಾಖೆಯಿಂದ ನೀಡಿದ ಗುರುತಿನ ಚೀಟಿಯೊಂದಿಗೆ ಅವರನ್ನು ಸೈನಿಕ ಕಲ್ಯಾಣ ಮತ್ತು ಪುನರ್ ವಸತಿ ಇಲಾಖೆಯಲ್ಲಿ ಭೇಟಿಯಾಗಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಶಿಕ್ಷಕರ ದಿನಾಚರಣೆ, ಸನ್ಮಾನ
ಗದಗ:  ತಾಲೂಕಿನ ಹುಲಕೋಟಿ ಗ್ರಾಮದ ಜಿಸಿಟಿಎಂ ಪ.ಪೂ. ಕಾಲೇಜಿನಲ್ಲಿ ಸೆ. 5ರಂದು ಮಧ್ಯಾಹ್ನ 2.30 ಗಂಟೆಗೆ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಸಮಾರಂಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ನಾಮಕರಣಗೊಂಡು ಡಾ. ಅರ್ಜುನ ಗೊಳಸಂಗಿ ಹಾಗೂ ಕರ್ನಾಟಕ ಇತಿಹಾಸ ಅಕಾಡೆಮಿ ಬೆಂಗಳೂರು ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಾಮಕರಣಗೊಂಡ ಪ್ರೊ. ಕೆ.ಎಂ.ಗರಗ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ವಿ.ಐ. ಹರ್ಲಾಪುರ ವಹಿಸುವರು. ಅತಿಥಿಗಳಾಗಿ ಮಾಜಿ ಶಾಸಕ ಡಿ.ಆರ್. ಪಾಟೀಲ, ಪ್ರೊ. ಆರ್.ಎಲ್. ಪೊಲೀಸ್‌ಪಾಟೀಲ, ನಿವೃತ್ತ ಪ್ರಾಚಾರ್ಯ ಎಂ.ಎಸ್. ಸತ್ಯನಾರಾಯಣ, ಡಿ.ಬಿ. ಓದುಗೌಡರ ಮುಂತಾದವರು ಉಪಸ್ಥಿತರಿರುವರು ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಮಾಸಿಕ ಸಂಗೀತ ಕಾರ್ಯಕ್ರಮ
ಗದಗ:  ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಸೆ. 5ರ ಸಂಜೆ 5.30 ಗಂಟೆಗೆ ಶ್ರೀಗುರು ಪುಟ್ಟರಾಜ ಗಾನಲಹರಿಯ 30 ನೇ ವಿಶೇಷ ಮಾಸಿಕ ಸಂಗೀತ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ವಹಿಸುವರು. ಅಧ್ಯಕ್ಷತೆಯನ್ನು ಹೊಳೆಆಲೂರಿನ ಪಪೂ ಮಹಾವಿದ್ಯಾಲಯದ ಉಪನ್ಯಾಸಕ ಎಚ್.ಎನ್.ಕಾಳೆ ವಹಿಸುವರು. ಅತಿಥಿಗಳಾಗಿ ಉಳವಪ್ಪ ಅಂಗಡಿ ಹಾಗೂ ಶ್ರೀಕೃಷ್ಣ ರಾಠೋಡ ಆಗಮಿಸುವರು. ಹೊನ್ನಾವರದ ಹಿಂದೂಸ್ತಾನಿ ಗಾಯಕ ಡಾ. ಅಶೋಕ ಹುಗ್ಗಣ್ಣವರ ಅವರಿಂದ ಸಂಗೀತ ಕಾರ್ಯಕ್ರಮ ಜರುಗಲಿದ್ದು,  ಅಲ್ಲಮಪ್ರಭು ಕಡಕೋಳ ತಬಲಾಸಾಥ್ ನೀಡುವರು ಎಂದು ವೀರೇಶ್ವರ ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜಸ್ವಾಮಿ ಹಿಡ್ಕಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement