ಹಳ್ಳ ದಾಟುವಾಗ ಪ್ರವಾಹಕ್ಕೆ ಸಿಲುಕಿ ಮಹಿಳೆ ಸಾವು
ನರಗುಂದ: ಗ್ರಾಮದ ಸಮೀಪದಲ್ಲಿರುವ ಹಿರೇಹಳ್ಳ ದಾಟುತ್ತಿದ್ದ ವೇಳೆ ಪ್ರವಾಹಕ್ಕೆ ಸಿಲುಕಿ ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ತಾಲೂಕಿನ ಜಗಾಪುರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅದೇ ಗ್ರಾಮದ ರೇಣುಕಾ ಸವದತ್ತಿ (38) ಮೃತಪಟ್ಟ ಮಹಿಳೆ. ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ನರಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.