ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಪ್ರಶಸ್ತಿಗಾಗಿ ಪುಸ್ತಕ ಆಹ್ವಾನ

Rashmi Kasaragodu
Updated On : 9 Sept 2013, 12:25 pm

ಗದಗ:  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಒಂದೂವರೆ ಕೋಟಿ ರುಪಾಯಿಗಳ ದತ್ತಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅರಳು ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕನ್ನಡದ ಯುವ ಬರಹಗಾರರಿಂದ ವಿವಿಧ ಸಾಹಿತ್ಯ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಆ.15, 2013ಕ್ಕೆ 35 ವರ್ಷ ಮೀರಿದ ಕನ್ನಡ ಯುವ ಬರಹಗಾರರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಈ ಸ್ಪರ್ಧೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ವಲಯಗಳ ಸಿಬ್ಬಂದಿಗಳೂ ಸೇರಿದಂತೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕವನ, ಸಣ್ಣ ಕಥೆ, ಕಾದಂಬರಿ, ನಾಟಕ, ಲಲಿತಪ್ರಬಂಧ, ಪರಿಸರ, ವಿನೋದ ಸಾಹಿತ್ಯ, ಅನುವಾದ, ಮಕ್ಕಳ ಸಾಹಿತ್ಯ, ವಿಮರ್ಶೆ, ಸಂಶೋಧನೆ ಈ ಹತ್ತು  ಸಾಹಿತ್ಯ ಪ್ರಕಾರಗಳಲ್ಲಿ ಕನ್ನಡದಲ್ಲಿ ರಚಿಸಿದ ಪುಸ್ತಕಗಳನ್ನು ಸ್ಪರ್ಧೆಗೆ ಕಳಿಸಬಹುದು. 2012ರ ಜನವರಿಯಿಂದ ಡಿಸೆಂಬರ್ ವರೆಗೆ ಪ್ರಥಮವಾಗಿ ಮುದ್ರಣವಾಗಿ ಪ್ರಕಟವಾಗಿರುವ ಪುಸ್ತಕಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದು. ಪ್ರತಿ ಒಂದು ಪ್ರಕಾರಕ್ಕೆ ಪುಸ್ತಕದ 3 ಪ್ರತಿಗಳನ್ನು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿಗೆ ಅಕ್ಟೋಬರ್ 30ರೊಳಗಾಗಿ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ. 080-26623584 ಇಲ್ಲಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement