ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸದೃಢ ಭಾರತ ನಿರ್ಮಾಣಕ್ಕೆ ಯುವಕರ ಪಾತ್ರ ಅವಶ್ಯ : ರಾಜೀವ ನಾಯಕ

Lingaraj Badiger
Updated On : 16 Sept 2013, 11:27 am

ಗದಗ:  ಸದೃಢ ಭಾರತ ನಿರ್ಮಾಣಕ್ಕೆ ಯುವಕರ ಪಾತ್ರ ಅವಶ್ಯ ಎಂದು ಡಿಡಿಪಿಐ ರಾಜೀವ ನಾಯಕ ಹೇಳಿದರು.
ಅವರು ಈಚೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಶಹರ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಎಲ್ಲರೂ ಸಕ್ರೀಯವಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು. ರಾಜ್ಯ, ರಾಷ್ಟ್ರದಲ್ಲಿ ಪ್ರತಿನಿಧಿಸಿ ಜಿಲ್ಲೆಯ ಕೀರ್ತಿ ತರುವಂತಾಗಬೇಕು ಎಂದರು. ಬೆಟಗೇರಿ ಸಿಪಿಐ ಆರ್.ಎಸ್. ಬೆಂತೂರ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರತಿಯೊಂದು ಮಕ್ಕಳಲ್ಲಿ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ಅಂತಹ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು. ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ ಮಾತನಾಡಿ, ಕ್ರೀಡೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು. ಅಧ್ಯಕ್ಷತೆಯನ್ನು ಗದಗ ತಾಲೂಕು ಪಂಚಾಯಿತಿ ಅಧ್ಯಕ್ಷ ಎಚ್.ಪಿ. ಇಂಗಳಳ್ಳಿ ವಹಿಸಿ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಮುಖ್ಯ ಅಥಿತಿಗಳಾಗಿ ಎಂ.ಎಂ. ಕಲಹಾಳ, ಎಸ್.ಎಂ. ಕೊಟಗಿ, ಬಿ.ಬಿ. ಕುಂದಗೋಳ, ಎಸ್.ಎನ್. ಬಳ್ಳಾರಿ ಭಾಗವಹಿಸಿದ್ದರು. ಎ.ಎಂ. ಕುಂಟೋಜಿ ಸ್ವಾಗತಿಸಿದರು. ಎಸ್.ಬಿ.ಪೂಜಾರ ನಿರೂಪಿಸಿದರು. ಪ್ರತಿಜ್ಞಾ ವಿಧಿಯನ್ನು ಎಸ್.ಬಿ. ಮುಳಗುಂದ ಬೋಧಿಸಿದರು. ಎ.ಬಿ. ಕಾಳೆ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement