ಇಂದು ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ
ಗದಗ: ರಾಜ್ಯ ಸಾಕ್ಷರತಾ ಮಿಷನ್ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಗದಗ, ತಾಲೂಕು ಲೋಕ ಶಿಕ್ಷಣ ಸಮಿತಿ ಮುಂಡರಗಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಸೆ. 17ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿಯ ಶಾಂತಾಬಾಯಿ ಕೊರ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಸಾಕ್ಷರತಾ ಪ್ರಮಾಣ ವಚನ ಬೋಧನೆ ಮಾಡುವರು.
ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ ಅವರು ಸಾಕ್ಷರತಾ ಧ್ವಜಾರೋಹಣ ನೆರವೇರಿಸುವರು. ರೋಣ ಶಾಸಕ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಸಂಸದರು, ಶಾಸಕರು, ಜಿ.ಪಂ. ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ತಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಎಸ್ಡಿಎಂಸಿ ಅಧ್ಯಕ್ಷರು ಆಗಮಿಸುವರು. ಇದೇ ಸಂದರ್ಭದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಕವಿತಾ ದಂಡಿನ ಅವರು ಉಪನ್ಯಾಸ ನೀಡುವರು.