ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕ್ರೀಡಾ ಸಂಘಟಕರಲ್ಲಿ ಶಿಸ್ತು ಅಗತ್ಯ

Mainashree
Updated On : 20 Sept 2013, 10:33 am

ಶಿರಹಟ್ಟಿ: ದೇಶಕ್ಕೆ ಸದೃಢ ಯುವಕರನ್ನು ನೀಡುವ ದೈಹಿಕ ಶಿಕ್ಷಣ ಇಲಾಖೆಗೆ ವಿಶೇಷ ಒತ್ತು ನೀಡುವ ಅವಶ್ಯಕತೆ ಇದ್ದು, ಅಶಿಸ್ತಿನಿಂದ ಕ್ರೀಡೆ ನಡೆಸುವುದನ್ನು ಬಿಟ್ಟು ಮಕ್ಕಳಿಗೆ ಶಿಸ್ತನ್ನು ಕಲಿಸುವಂತೆ ಮಾಜಿ ಸಚಿವ ಬಸವರಾಜ ಹೊರಟ್ಟಿ ಕರೆ ನೀಡಿದರು. ಅವರು ಗುರುವಾರ ಎಫ್.ಎಂ. ಡಬಾಲಿ ಸಂಯುಕ್ತ ಪಪೂ ಮಹಾವಿದ್ಯಾಲಯದಲ್ಲಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ, ಎಫ್.ಎಂ. ಡಬಾಲಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2013-14ನೇ ಸಾಲಿನ ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ದೈಹಿಕ ಶಿಕ್ಷಕರು ಕ್ರೀಡಾಕೂಟಗಳ ಸಂದರ್ಭದಲ್ಲಿ ತಮ್ಮದೇ ಆದ ವಸ್ತ್ರ ಸಂಹಿತೆ ಇದ್ದು, ಅದನ್ನು ಮರೆಮಾಚಿಸುವ ರೀತಿಯಲ್ಲಿ ವರ್ತಿಸುತ್ತಿರುವುದು ಅತ್ಯಂತ ವಿಶಾದನೀಯ ಎಂದು ಖೇದ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಮಿತಿ ಅಧ್ಯಕ್ಷೆ ಹಾಗೂ ಜಿಪಂ ಸದಸ್ಯೆ ಅನ್ನಪೂರ್ಣಾ ಡಬಾಲಿ ಮಾತನಾಡಿ, ಶಾರೀರಿಕ, ಮಾನಸಿಕ ನೆಮ್ಮದಿಗೆ ಕ್ರೀಡೆ ಅಗತ್ಯ. ಸೋಲನ್ನು ಸವಾಲಾಗಿ ಸ್ವೀಕರಿಸಿ ಕ್ರೀಡೆಗಳಲ್ಲಿ ಭಾಗವಹಿಸಿ ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸು ಸಾಧಿಸುವಂತೆ ಕರೆ ನೀಡಿದರು. ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ, ಕಮಲವ್ವ ಸಜ್ಜನರ, ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಉಪಾಧ್ಯಕ್ಷೆ ಮೀನಾಕ್ಷಿ ತಳವಾರ, ಆಡಳಿತ ಮಂಡಳಿ ಚೇರ್‌ಮನ್ ಡಿ.ಎನ್. ಡಬಾಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವೈ.ಎಸ್. ಪಾಟೀಲ, ಪಪಂ ಸದಸ್ಯ ಸಂತೋಷ ಕುರಿ, ಬುಡನಶ್ಯಾ ಮಕಾನದಾರ ಇದ್ದರು. ಪ್ರಾಚಾರ್ಯ ಎನ್.ಬಿ. ಕಲಾವಂತ ಸ್ವಾಗತಿಸಿದರು. ಎಂ.ಕೆ. ಲಮಾಣಿ ನಿರೂಪಿಸಿದರು. ವಿಶಾಲಾಕ್ಷಿ ದೇಶಪಾಂಡೆ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement