ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ರೇಲ್ವೆ ಬೇಡಿಕೆ: ಖರ್ಗೆ ಜತೆ ಚರ್ಚೆ

Lingaraj Badiger
Updated On : 26 Sept 2013, 11:29 am

ಗದಗ: ಹಾವೇರಿ ಲೋಕಸಭಾ ವ್ಯಾಪ್ತಿಯಲ್ಲಿನ ವಿವಿಧ ರೇಲ್ವೆ ಬೇಡಿಕೆಗಳ ಈಡೇರಿಕೆ ಕುರಿತು ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಜತೆಗೆ ಸೆ. 27ರಂದು ನವದೆಹಲಿಯಲ್ಲಿ ಚರ್ಚಿಸಲು ಸಮಯ ನಿಗದಿಯಾಗಿದೆ ಎಂದು ಹಾವೇರಿ ಸಂಸದ ಶಿವಕುಮಾರ ಉದಾಸಿ ಹೇಳಿದರು.
ಅವರು ಜಿಲ್ಲಾಡಳಿತ ಭವನದಲ್ಲಿ ಬುಧವಾರ ವಿವಿಧ ಪ್ರಗತಿ ಪರಿಶೀಲನಾ ಸಭೆಗಳ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಕುರಿತು ಅವರಿಂದ ಈಗಾಗಲೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ. ಈ ಭಾಗದ ಜನತೆಯ ಬಹುದಿನದ ಬೇಡಿಕೆಯಾದ ಗದಗ-ವಾಡಿ ನೂತನ ರೈಲು ಮಾರ್ಗ, ಬ್ಯಾಡಗಿ ಎಕ್ಸ್‌ಪ್ರೆಸ್, ಗದಗ ಮತ್ತು ಹಾವೇರಿ ನಿಲ್ದಾಣ ಮೇಲ್ದರ್ಜೆಗೇರಿಸುವುದು, ಯಲವಿಗಿ ಮತ್ತು ಬ್ಯಾಡಗಿ ರೇಲ್ವೆ ನಿಲ್ದಾಣಗಳಲ್ಲಿ ಪ್ರಮುಖ ರೈಲುಗಳ ನಿಲುಗಡೆ ಸೇರಿದಂತೆ ಹಲವಾರು ಬೇಡಿಕೆಗಳ ಕುರಿತು ಚರ್ಚೆ ನಡೆಯಲಿದೆ ಎಂದರು. ಈಚೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ಗದಗ-ವಾಡಿ ರೇಲ್ವೆ ಮಾರ್ಗದ ಕುರಿತು ಚರ್ಚೆ ನಡೆದಿದ್ದು, ಈ ಬಾರಿ ಭರವಸೆ ಈಡೇರಿಸುವ ವಿಶ್ವಾಸವಿದೆ ಎಂದರು.
ನೋ ಕಾಮೆಂಟ್...
ಮುಂಬರುವ ಲೋಕಸಭಾ ಚುನಾವಣೆ ಕುರಿತಂತೆ ಕೆಜೆಪಿ-ಬಿಜೆಪಿ ಹೊಂದಾಣಿಕೆಯ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಅಷ್ಟೇ ಅಲ್ಲದೇ, ಇತ್ತೀಚೆಗೆ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಘೋಷಣೆಯ ಬಳಿಕ ಯು.ಆರ್. ಅನಂತಮೂರ್ತಿ ನೀಡಿದ ಹೇಳಿಕೆಗೂ ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement