ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಡಾ. ಅಂಬೇಡ್ಕರ್ ಕಂಚಿನ ಪ್ರತಿಮೆ ಸ್ಥಾಪಿಸಿ

Lingaraj Badiger
Updated On : 27 Sept 2013, 11:00 am

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಸೆ. 26
ಪಟ್ಟಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಕಂಚಿನ ಪ್ರತಿಮೆ ಸ್ಥಾಪನೆ ಮಾಡುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರಾಮಚಂದ್ರ ಗಡದವರ ಹಾಗೂ ತಾಲೂಕು ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಕಂಟೆಮ್ಮನವರ ನೇತೃತ್ವದಲ್ಲಿ ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಮಚಂದ್ರ ಗಡದವರ ಮಾತನಾಡಿ, ಅನೇಕ ವರ್ಷಗಳಿಂದ ಪಟ್ಟಣದಲ್ಲಿ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಸ್ಥಾಪನೆ ಮಾಡುವಂತೆ ಆಗ್ರಹಿಸಿ ತಹಸೀಲ್ದಾರ್ ಹಾಗೂ ಪಪಂ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೆಳವರ್ಗದಲ್ಲಿ ಜನಿಸಿ ಮೇಲು ಕೀಳು ಎಂಬ ಭೇದ-ಭಾವ ಹೋಗಲಾಡಿಸಿದ ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಕಂಚಿನ ಪ್ರಿತಿಮೆ ಸ್ಥಾಪನೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿಳಂಬನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ದೂರಿದರು.
ಯಾವುದೇ ಸಬೂಬ ಹೇಳದೇ, ತುರ್ತಾಗಿ ಪಟ್ಟಣದಲ್ಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ಮುಂದಾಗದೇ ಹೋದಲ್ಲಿ ಬೀದಿಗಿಳಿದು ಹೋರಾಟ ಮಾಡುವುದಲ್ಲದೇ ಕಾರ್ಯಾಲಯದೆದುರು ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಮನವಿ ಸ್ವೀಕರಿಸಿದ ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ ಮಾತನಾಡಿ, ನಮ್ಮ ನಿಮ್ಮೆಲ್ಲರಿಗೂ ಸಂವಿಧಾನ ಬದ್ಧ ಹಕ್ಕು ನೀಡಿದ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಸ್ಥಾಪನೆ ಮಾಡುವ ಕುರಿತು ಪಪಂ ಮೊದಲನೆ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರ ಗಮನಕ್ಕೆ ತಂದು, ಸಭೆಯಲ್ಲಿ ಎಲ್ಲರ ಅನುಮತಿ ಪಡೆದು ಜಿಲ್ಲಾಧಿಕಾರಿಗಳ ಗಮನಕ್ಕೆ ಕಳುಹಿಸುವುದಾಗಿ ತಿಳಿಸಿದರು.
ಮಹಾಂತೇಶ ಗುಡಿಮನಿ, ಮರಿಯಪ್ಪ ಗೋಡೆಣ್ಣವರ, ಸಂಜೀವ ಗೋಡೆಣ್ಣವರ, ಜಟ್ಟಪ್ಪ ಮರ್ಚಣ್ಣವರ, ಮರಿಯಪ್ಪ ಪೂಜಾರ, ಹನುಮಂತ ಗುಡಿಮನಿ, ಆನಂದ ಗೋಡೆಣ್ಣವರ, ಚಂದ್ರು ಪೂಜಾರ, ಸಂತೋಷ ಬಡೆಣ್ಣವರ, ರಮೇಶ ಕಟ್ಟೆಮ್ಮನವರ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement