ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

5 ವರ್ಷ ನಾನೇ ಸಿಎಂ: ಸಿದ್ದು

Mainashree
Updated On : 12 Apr 2014, 10:15 am

ಗದಗ: ನಮ್ಮ ಸರ್ಕಾರ 5 ವರ್ಷ ಪೂರೈಸುತ್ತೆ, ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಲೋಕಸಭೆ ಚುನಾವಣೆಯ ಬಳಿಕ ಮುಖ್ಯಮಂತ್ರಿ ಬದಲಾವಣೆ ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ಗದಗ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮದು ಸಾಮಾಜಿಕ ನ್ಯಾಯದ ತಳಹದಿ ಇರುವ ಸರ್ಕಾರ. ನಾನು ಬಸವಣ್ಣನವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಕೆಲಸ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಮೋದಿ ಅಲೆ ಇದೆ, ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ, ಸಹಜವಾಗಿ ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುತ್ತದೆ ಎನ್ನುವುದು ತೀರಾ ಹಾಸ್ಯಾಸ್ಪದ ಹಾಗೂ ಕಪೋಲಕಲ್ಪಿತ. ಈ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಈ ಅವಧಿ ಪೂರ್ಣಗೊಳ್ಳುವವರೆಗೂ ನಾನೇ ಸಿಎಂ ಆಗಿರುತ್ತೇನೆ ಎಂದರು.
ಗುರುವಾರ ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ, ಚುನಾವಣೆ ಬಳಿಕಕ ಸಿದ್ದರಾಮಯ್ಯ ರು. 1ಗೆ ಕೆಜಿ ಅಕ್ಕಿ ಕೊಡುವುದನ್ನು ನಿಲ್ಲಿಸಿ ಬಿಡುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ನಾವು ಬಡವರ ಪರವಾಗಿಯೇ ಕೆಲಸ ಮಾಡುತ್ತಿದ್ದೇವೆ. ಅವರಿಗಾಗಿ ಇನ್ನು ಹೆಚ್ಚಿನ ಯೋಜನೆಗಳನ್ನು ರೂಪಿಸುತ್ತೇವೆ ಹೊರತು, ಜಾರಿಗೆ ತಂದಿರುವ ಯಾವುದೇ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement