ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮೂಲ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಿ

Lingaraj Badiger
Updated On : 14 Apr 2014, 11:29 am

ಗದಗ ನಗರದ ಹಮಾಲ ಕಾಲೋನಿ ಹಾಗೂ ರಾಜೀವಗಾಂಧಿ ನಗರ ಭಾಗಗಳಲ್ಲಿ ಹೆಚ್ಚಾಗಿ ಬಡವರೇ ವಾಸಿಸುತ್ತಿದ್ದು, ಈ ಭಾಗದಲ್ಲಿ ಮೂಲ ಸೌಲಭ್ಯಗಳ ಕೊರತೆ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾರ್ವಜನಿಕರ ಬದುಕು ದುಸ್ತರವಾಗುತ್ತಿದೆ. ಕುಡಿವ ನೀರು, ನೈರ್ಮಲ್ಯ, ಚರಂಡಿಗಳ ಶುಚಿತ್ವದ ಕೊರತೆ ಕಂಡುಬರುತ್ತಿದೆ. ಈ ಕುರಿತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಕಂಡುಬರುತ್ತಿಲ್ಲ. ನಾನಾ ಸಾಂಕ್ರಾಮಿಕ ರೋಗಗಳು ಹರಡುವ ಆತಂಕವಿದೆ. ಈ ಕುರಿತು ಜಿಲ್ಲಾಡಳಿತ, ನಗರಸಭೆ ಹೆಚ್ಚಿನ ಗಮನ ಹರಿಸಬೇಕು. ಅಲ್ಲದೇ ಕುಡಿಯುವ ನೀರಿನ ಸಮಸ್ಯೆ ಅವಳಿ ನಗರದ ಎಲ್ಲ ವಾರ್ಡ್‌ಗಳಲ್ಲಿ ಕಂಡುಬರುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ಈಚೆಗೆ ಅಧಿಕಾರ ವಹಿಸಿಕೊಂಡ ಸಚಿವರು ಪ್ರಾರಂಭದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸಲು ಹೆಚ್ಚಿನ ಆದ್ಯತೆ ನೀಡಿದ್ದರಾದರೂ ಅದು ಕಾರ್ಯರೂಪಕ್ಕೆ ಬಾರದೆ ಮತ್ತೆ ಗದಗ-ಬೆಟಗೇರಿ ಅವಳಿ ನಗರದ ನೀರಿನ ಸಮಸ್ಯೆ ಉಲ್ಬಣಿಸುತ್ತಿದೆ. ಬೇಸಿಗೆಯು ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇನ್ನೂ ಭೀಕರವಾಗುವ ಸಂಭವವಿದೆ. ಈ ಕುರಿತು ಸಂಬಂಧಿಸಿದ ಶಾ ಸಕ, ಸಚಿವರು, ಜಿಲ್ಲಾಡಳಿತ, ನಗರಸಭೆ ಹೆಚ್ಚಿನ ಆದ್ಯತೆ ನೀಡಿ ಕುಡಿಯುವ ನೀರಿನ ಸಮಸ್ಯೆ ಮತ್ತು ಮೂಲ ಸಮಸ್ಯೆಗಳನ್ನು ಈಡೇರಿಸಿ ಸಾರ್ವಜನಿಕರಿಗೆ ಅನಕೂಲ ಕಲ್ಪಿಸಿಕೊಡಬೇಕು.
- ಮಂಜುನಾಥ ಗಂಟಿಮಠ, ಗದಗ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement