ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮೌಲ್ಯಯುತ ಜೀವನಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ತತ್ವ ಸಹಕಾರಿ: ಪಂಡಿತ

Lingaraj Badiger
Updated On : 15 Apr 2014, 1:16 am

ರೋಣ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಆದರ್ಶ, ತತ್ವಗಳು ಮೌಲ್ಯಯುತ ಜೀವನಕ್ಕೆ ಸಹಕಾರಿ ಎಂದು ತಹಸೀಲ್ದಾರ್ ಎ.ಜಿ. ಪಂಡಿತ ಹೇಳಿದರು. ಅವರು ಸೋಮವಾರ ತಹಸೀಲ್ದಾರ್ ಕಾರ್ಯಾಲಯ ಸಭಾಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಭಾರತರತ್ನ ಡಾ. ಬಿ.ಆರ್. ಅಂಬೆಡ್ಕರ್ ಅವರ 123ನೇ ಜಯಂತ್ಯುತ್ಸವ ಅಂಗವಾಗಿ ಮಹನೀಯರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ ಮಾತನಾಡಿದರು. ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಎಲ್.ಎ. ಮೇಸ್ತಾ ಮಾತನಾಡಿ, ಡಾ. ಬಿ.ಅರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಅಸಾಮಾನ್ಯವಾಗಿದೆ. ಜಾಗತಿಕ ಮಟ್ಟದಲ್ಲಿ ಅಭೂತಪೂರ್ವ ಸಾಧನೆಗೈದಿದ್ದಾರೆ ಎಂದರು. ಸಹಾಯಕ ಚುನಾವಣೆ ಅಧಿಕಾರಿ ಷಡಕ್ಷರಪ್ಪ, ಬಿಇಒ ಡಿ.ಐ. ಅಸುಂಡಿ, ಜಿಪಂ ಎಇಇ ಕೆ.ಎಲ್. ಕಟ್ಟಿಮನಿ, ಸಿಪಿಐ ವೆಂಕಟಪ್ಪ ನಾಯಕ, ಪಿಎಸ್‌ಐ ಡಿ.ಬಿ. ಪಾಟೀಲ, ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಸ್.ಎ. ಸೂಡಿಶೆಟ್ಟರ, ಜಲಾನಯನ ಅಧಿಕಾರಿ ಎಸ್.ಪಿ. ಕಾಶಪ್ಪನ್ನವರ, ಬಿಸಿಎಂ ಇಲಾಖೆ ಅಧಿಕಾರಿ ಎಸ್.ಎಸ್. ಈಟೇಕಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಉಪ ತಹಸೀಲ್ದಾರ್ ಎನ್.ಎಸ್. ಕೂಡಲ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement