ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸಲೀಂ ಅಹ್ಮದ್ ಪರ ನಟಿ ಭಾವನಾ ಪ್ರಚಾರ

Lingaraj Badiger
Updated On : 15 Apr 2014, 1:09 am

ಗಜೇಂದ್ರಗಡ:  ಹಾವೇರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಪರ ಚಿತ್ರನಟಿ ಭಾವನಾ ಸೋಮವಾರ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಮತ ಯಾಚಿಸಿದರು.
ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಚಿತ್ರನಟಿ ಭಾವನಾ ಮಾತನಾಡಿ, ಬಿಜೆಪಿಯಿಂದ ದೇಶದ ಅಭಿವೃದ್ಧಿ ಅಸಾಧ್ಯ. ಈ ಬಾರಿಯೂ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಖಚಿತ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್‌ರಿಗೆ ಮತ ನೀಡಿ ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಶಾಸಕ ಜಿ.ಎಸ್. ಪಾಟೀಲ ಮಾತನಾಡಿದರು. ಮಾಜಿ ಸಂಸದ ಆರ್.ಎಸ್. ಪಾಟೀಲ, ಅಶೋಕ ಬಾಗಮಾರ, ವೀರಣ್ಣ ಸೊನ್ನದ, ಪುರಸಭೆ ವಿಪಕ್ಷ ನಾಯಕ ಶಿವರಾಜ ಘೋರ್ಪಡೆ, ಸ್ಪಂದನಾ ಮಹಿಳಾ ಮಂಡಳ ಅಧ್ಯಕ್ಷೆ ಶಶಿಕಲಾ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಕಾಲಕಾಲೇಶ್ವರ ವೃತ್ತದಿಂದ ತೆರೆದ ವಾಹನದಲ್ಲಿ ಶಾಸಕ ಜಿ.ಎಸ್. ಪಾಟೀಲ, ಮಾಜಿ ಸಂಸದ ಆರ್.ಎಸ್. ಪಾಟೀಲ ಹಾಗೂ ಪಕ್ಷದ ಸಾವಿರಾರು ಕಾರ್ಯಕರ್ತರ ಜತೆ ಚಿತ್ರನಟಿ ಭಾವನಾ ಪಟ್ಟಣದ ವಿವಿಧ ಮಾರ್ಗಗಳಲ್ಲಿ ರೋಡ್ ಶೋ ನಡೆಸಿದರು. ನೆಚ್ಚಿನ ತಾರೆಯನ್ನು ನೋಡಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement