ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮತದಾನದಿಂದ ದೂರ: ಮನವೊಲಿಸಿದ ಮಾಜಿ ಶಾಸಕ

Mainashree
Updated On : 18 Apr 2014, 10:01 am

ಲಕ್ಷ್ಮೇಶ್ವರ: ಪಟ್ಟಣ ಹಾಗೂ ಹೋಬಳಿಯ ಬಹುತೇಕ ಕಡೆಯಲ್ಲಿ ಶಾಂತಿಯುತ ಮತದಾನವಾಗಿದೆ. ಪಟ್ಟಣದ ಕೆಂಚಲಾಪುರ ಓಣಿಯಲ್ಲಿನ ಪ್ರಾಥಮಿಕ ಶಾಲೆಯ ಭೂತ ನಂ. 87ರಲ್ಲಿ ಮತಯಂತ್ರ ಪ್ರಾರಂಭದಲ್ಲಿ ಕೈಕೊಟ್ಟಿದ್ದರಿಂದ 15 ನಿಮಿಷಗಳ ನಂತರ ಮತದಾನ ಕಾರ್ಯ ಪ್ರಾರಂಭವಾಯಿತು.
ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿ ಬೆಳಿಗ್ಗೆ ಸುಮಾರು 60-70 ಜನರ ಗುಂಪೊಂದು ಗ್ರಾಮದಲ್ಲಿನ ಕೆರೆ ಒತ್ತುವರಿ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಧೋರಣೆ ಖಂಡಿಸಿ ಮತದಾನದಿಂದ ದೂರ ಉಳಿದಿದ್ದರು. ಮತದಾನದಿಂದ ದೂರ ಉಳಿದಿದ್ದ ವಿಷಯ ತಿಳಿದು ಅಲ್ಲಿಗೆ ಆಗಮಿಸಿದ ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ ಹಾಗೂ ಎಸ್.ಎನ್. ಪಾಟೀಲರು ಮತದಾರರ ಮನವೊಲಿಸಿ ಮತದಾನ ಮಾಡಿಸುವಲ್ಲಿ ಯಶಸ್ವಿಯಾದರು. ಲಕ್ಷ್ಮೇಶ್ವರ ಹೋಬಳಿಯ ಗ್ರಾಮಗಳಲ್ಲಿ ಮುಂಜಾನೆ ನಿಧಾನಗತಿಯಲ್ಲಿ ಸಾಗಿದ್ದ ಮತದಾನ ಪ್ರಕ್ರಿಯೆಯು ಮಧ್ಯಾಹ್ನದ ನಂತರ ಚುರುಕುಗೊಂಡಿತು. ಸುಡು ಬಿಸಿಲನ್ನು ಲೆಕ್ಕಿಸದೆ ಸಾಕಷ್ಟು ಜನರು ಸರದಿಯಲ್ಲಿ ನಿಂತು ಮತದಾನ ಮಾಡಿದ್ದು ವಿಶೇಷವಾಗಿತ್ತು. ಸಂಜೆ 5 ಗಂಟೆ ವೇಳೆಗೆ ಶೇ. 60ರಿಂದ 65ರಷ್ಟು ಮತದಾನವಾದ ಬಗ್ಗೆ ವರದಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement