ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಪಡಿತರ ಖಾತರಿ ಯೋಜನೆಗೆ ಚಾಲನೆ

Vishwanath S
Updated On : 2 Feb 2014, 12:06 pm

ಕನ್ನಡಪ್ರಭ ವಾರ್ತೆ, ಗದಗ, ಫೆ. 1
ರಾಜ್ಯ ಸರ್ಕಾರವು ಬಡವರಿಗೆ ಸಹಕಾರಿಯಾಗಲಿ ಎಂಬ ಸದುದ್ದೇಶದಿಂದ ಫೆ. 1ರಿಂದ ಪಡಿತರ ಖಾತರಿ ಯೋಜನೆಯನ್ನು ರಾಜ್ಯಾದ್ಯಂತ ಪ್ರಾರಂಭಿಸಿದ್ದು, ಇನ್ನು ಮುಂದೆ ಪಡಿತರ ಕೇಂದ್ರಗಳು ಪ್ರತಿದಿನ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆವರೆಗೆ ತಿಂಗಳ 1ರಿಂದ 10ನೇ ದಿನಾಂಕದವರೆಗೆ ಕಾರ್ಯನಿರ್ವಹಿಸಲಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಕೋಟುಮಚಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮಾರ್ತಾಂಡಪ್ಪ ಗಡಗಿ ಕರೆ ನೀಡಿದರು.
ಅವರು ಶನಿವಾರ ತಾಲೂಕಿನ ಕೋಟುಮಚಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ-2 ರಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಡಿತರ ಖಾತರಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಪಂ ಸದಸ್ಯ ಪಾಲಾಕ್ಷಯ್ಯ ಬಳಿಗೇರಮಠ ಹಾಗೂ ಯಲ್ಲಪ್ಪ ಗೆಜ್ಜಿ ಮಾತನಾಡಿ, ರಾಜ್ಯ ಸರ್ಕಾರದ ನಿರ್ದೇಶನದಂತೆ ಫೆ. 1ರಿಂದ ಪಡಿತರ ಖಾತರಿ ಯೋಜನೆ ಹೆಸರಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಧಾನ್ಯ ಅಕ್ಕಿ, ಗೋದಿ, ಸಕ್ಕರೆಯನ್ನು ವಿತರಿಸಲಾಗುತ್ತಿರುವುದು ಸಂತಸ ತಂದಿದೆ. ಈ ಯೋಜನೆಯ ಅನ್ವಯ  ನ್ಯಾಯಬೆಲೆ ಅಂಗಡಿಗಳು ತಿಂಗಳ 1ರಿಂದ 10 ನೇ ತಾರೀಖಿನವರೆಗೆ ಬೆಳಗ್ಗೆ 8ರಿಂದ ರಾತ್ರಿ 8 ಗಂಟೆಯ ವರೆಗೆ ಕಾರ್ಯನಿರ್ವಹಿಸುತ್ತವೆ. ಜಿಲ್ಲೆಯ ಪಡಿತರ ಚೀಟಿದಾರರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸೂಚಿಸಿದರು.
ಗ್ರಾಪಂ ಮಾಜಿ ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ಗ್ರಾಪಂ ಸದಸ್ಯ ಪ್ರಕಾಶ ಕುಲಕರ್ಣಿ ಮುಂತಾದವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಂದುಸ್ವಾಮಿ ದೊಡ್ಡಮನಿ, ತಾಪಂ ಮಾಜಿ ಸದಸ್ಯ ಪ್ರಕಾಶ ಮುಧೋಳ, ಗ್ರಾಪಂ ಸದಸ್ಯ ಬಸವರಾಜ ನವಲಗುಂದ, ಶಂಕ್ರಪ್ಪ ತಳವಾರ, ಈರಪ್ಪ ಪೂಜಾರ, ಫಕೀರಪ್ಪ ಹಡಪದ, ದೇವಪ್ಪ ಕಟಗಳ್ಳಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯವಸ್ಥಾಪಕ ಲೋಕನಗೌಡ ಸಂಕನಗೌಡ್ರ ಸ್ವಾಗತಿಸಿ, ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement