ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕ್ರೀಡೆಯಿಂದ ಆರೋಗ್ಯ ವೃದ್ಧಿ

Srinivasa Murthy VN
Updated On : 3 Feb 2014, 11:52 am

ಕನ್ನಡಪ್ರಭ ವಾರ್ತೆ, ಮುಂಡರಗಿ, ಫೆ. 2
ದೇಹಕ್ಕೆ ಬೇಕಾದ ವ್ಯಾಯಾಮ ಸಿಗದೇ ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ದೊಡ್ಡ ಕಾಯಿಲೆಗಳಿಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಎಲ್ಲರಲ್ಲೂ ಕ್ರೀಡಾ ಮನೋಭಾವನೆ ಬೆಳೆಯುವುದು ಅವಶ್ಯವಾಗಿದೆ ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಪಟ್ಟಣದ ಜ. ಅನ್ನದಾನೀಶ್ವರ ಕಾಲೇಜು ಮೈದಾನದ ಆವರಣದಲ್ಲಿ ಭಾನುವಾರ ತಾಲೂಕು ಹಿಂದುಳಿದ ವರ್ಗಗಳ ಇಲಾಖೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಿಂದ ಮನುಷ್ಯನ ಆರೋಗ್ಯ ವೃದ್ಧಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸಮಯ ಸಿಕ್ಕಾಗ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಇಂದು ವಿದೇಶಿ ಕ್ರೀಡೆಗಳಿಗೆ ಸಿಲುಕಿ ನಮ್ಮ ದೇಶಿ ಕ್ರೀಡೆಗಳಾದ ಚಿನ್ನಿದಾಂಡು, ಕಬಡ್ಡಿ, ಖೋಖೋ, ಕುಸ್ತಿ, ಲಗೋರಿಯಂತಹ ಗ್ರಾಮೀಣ ದೇಶಿಕ್ರೀಡೆಗಳು ಮಾಯವಾಗುತ್ತಿದ್ದು, ಅಲ್ಲೊಂದು ಇಲ್ಲೊಂದು ಗ್ರಾಮಗಳಲ್ಲಿ ಮಾತ್ರ ಇಂದಿಗೂ ಕೆಲವು ಸಂದರ್ಭಗಳಲ್ಲಿ ಗ್ರಾಮೀಣ ಕ್ರೀಡೆಗಳನ್ನು ನಡೆಸುತ್ತಾ ಬಂದಿದ್ದಾರೆ. ಅವುಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದರು.
ತಾಪಂ ಉಪಾಧ್ಯಕ್ಷ ಅಕ್ಕಮಹಾದೇವಿ ಹಾರೋಗೇರಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ನಿಂಗಬಸಪ್ಪ ಪ್ಯಾಟಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಿ.ಮೋಹನ್, ಸಮಾಜ ಕಲ್ಯಾಣಾಧಿಕಾರಿ ಬಿ.ಎಸ್. ಮುಧೋಳ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಹರ್ತಿ, ಯುವಜನ ಸೇವಾ ಕ್ರೀಡಾಧಿಕಾರಿ ಎಲ್.ಬಿ. ಹುಡೇದ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಡಿ. ಭಾವಿಮನಿ, ರಾಮು ಕಲಾಲ, ಎಸ್.ಡಿ. ಮಕಾಂದಾರ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement