ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಭದ್ರಾದಿಂದ ತುಂಗಭದ್ರಾ ನದಿಗೆ ನೀರು ಪೂರೈಸಿ

Lingaraj Badiger
Updated On : 6 Feb 2014, 1:50 am

ಗದಗ: ಗದಗ-ಬೆಟಗೇರಿ ಅವಳಿ ನಗರಕ್ಕೆ ಮುಂಡರಗಿ ಸಮೀಪ ಕೊರ್ಲಹಳ್ಳಿ ಬಳಿ ತುಂಗಭದ್ರಾ ನದಿಯಿಂದ ಕುಡಿವ ನೀರು ಪೂರೈಕೆಯಾಗುತ್ತಿದ್ದು, ಬೇಸಿಗೆ ಪ್ರಾರಂಭವಾಗಿದ್ದರಿಂದ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಅವಳಿನಗರಕ್ಕೆ ಕುಡಿವ ನೀರಿನ ತೊಂದರೆಯಾಗುತ್ತಿದೆ. ಕಾರಣ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 2 ಟಿಎಂಸಿ ನೀರು ಪೂರೈಸುವಂತೆ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಆಗ್ರಹಿಸಿದೆ.
ಈ ಕುರಿತು ಪ್ರಕಟಣೆ ನೀಡಿ, ಅವಳಿ ನಗರಕ್ಕೆ 15 ರಿಂದ 20 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ಅವಳಿ ನಗರದಲ್ಲಿ ಕೆರೆ ಮತ್ತು ಕೊಳವೆ ಬಾವಿಗಳು ಬತ್ತಿವೆ. ಇದರಿಂದ ದನ, ಕರುಗಳು ಪ್ರಾಣಿ ಪಕ್ಷಿಗಳು ನೀರಿನ ಸಮಸ್ಯೆಯಿಂದ ತತ್ತರಿಸುವಂತಾಗಿದೆ. ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ ಸರ್ಕಾರವು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಹಂತ ಹಂತವಾಗಿ ನೀರು ಬಿಡುಗಡೆ ಮಾಡಿ ಕುಡಿಯುವ ನೀರಿಗೆ ಅನುಕೂಲ ಮಾಡಿಕೊಡುತ್ತಾ ಬಂದಿದೆ. ಇನ್ನೂ ತುಂಗಭದ್ರಾ ನದಿಯಲ್ಲಿ ನೀರಿನ ಸಂಗ್ರಹ ಇದ್ದಾಗಲೇ ನೀರಿನ ಪೂರೈಕೆಯಾಗಬೇಕು. ಇಲ್ಲದಿದ್ದರೆ ಭೂಮಿಯಲ್ಲಿ ನೀರು ಇಂಗಿ ಬಿಡುಗಡೆಯಾದ ನೀರು ಸಾರ್ವಜನಿಕರಿಗೆ ಪೂರೈಕೆಯಾಗುವುದಿಲ್ಲ. ಕಾರಣ ಭದ್ರಾ ಜಲಾಶಯದಿಂದ 2 ಟಿಎಂಸಿ ನೀರು ಹಂತ ಹಂತವಾಗಿ ತುಂಗಭದ್ರಾ ನದಿಗೆ ಬಿಡುಗಡೆಗೆ ಸೂಕ್ತ ಕ್ರಮ ಕೈಗೊಂಡು ಗದಗ-ಬೆಟಗೇರಿ ಅವಳಿ ನಗರಕ್ಕೆ ಸಮರ್ಪಕವಾಗಿ ನೀರಿನ ಪೂರೈಕೆಗೆ ಅನುಕೂಲ ಮಾಡುವುದು. ಇನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ ದಿನ ಶುದ್ಧ ಕುಡಿಯುವ ನೀರು ಪೂರೈಸಲು ಈ ಹಿಂದೆ ಹುಲಿಗುಡ್ಡ ಏತ ನೀರಾವರಿ ಯೋಜನೆಯ ಮೂಲಕ 2ನೇ ಹಂತದ ಕಾಮಗಾರಿಯ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿತ್ತು. ಆದರೆ, ಇದುವರೆಗೂ ಕಾಮಗಾರಿ ಪ್ರಾರಂಭವಾಗಿಲ್ಲ. 2ನೇ ಹಂತದ ಕಾಮಗಾರಿ ತೀವ್ರಗತಿಯಲ್ಲಿ ಪ್ರಾರಂಭಿಸಿ ಗದಗ ಜಿಲ್ಲೆಗೆ ಸಮರ್ಪಕವಾಗಿ ಕುಡಿವ ನೀರು ಪೂರೈಕೆಗೆ ಅನುಕೂಲ ಮಾಡಿಕೊಡಬೇಕೆಂದು ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮತ್ತು ಜಿಲ್ಲಾಧಿಕಾರಿಗೆ ಸಂಸ್ಥೆಯ ಅಧ್ಯಕ್ಷ ಎಲ್.ಸಿ. ಲಿಂಬಯ್ಯಸ್ವಾಮಿಮಠ ಮತ್ತು ಗೌರವ ಕಾರ್ಯದರ್ಶಿ ವೀರಣ್ಣ ಬೇವಿನಮರದ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement