ಇಂದು ಪಠ್ಯೇತರ ಚಟುವಟಿಕೆ ಮುಕ್ತಾಯ ಸಮಾರಂಭ
ಮುಂಡರಗಿ: ಪಪೂ ಶಿಕ್ಷಣ ಇಲಾಖೆ, ಮುಂಡರಗಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2013-14ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್ ಘಟಕ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಫೆ. 7ರಂದು ಬೆಳಗ್ಗೆ 10.30ಕ್ಕೆ ಕಾಲೇಜಿನ ಆವರಣದಲ್ಲಿ ಜರುಗಲಿದೆ. ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ರಾಮಕೃಷ್ಣ ದೊಡ್ಡಮನಿ ಅಧ್ಯಕ್ಷತೆ ವಹಿಸುವರು. ಅತಿಥಿ ಉಪನ್ಯಾಸಕರಾಗಿ ವೈ.ನ್. ಗೌಡರ ಆಗಮಿಸುವರು. ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೇಮಂತಗೌಡ ಪಾಟೀಲ, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಡಿ. ಮಕಾಂದಾರ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವರು ಎಂದು ಪ್ರಕಟಣೆ ತಿಳಿಸಿದೆ.