21 ಕ್ಷೇತ್ರಗಳಲ್ಲಿ ಗೆಲ್ಲಿಸುವುದೇ ಗುರಿ
ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು 21 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸುವುದೇ ನನ್ನ ಮುಖ್ಯ ಗುರಿಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಈ ಹಿಂದೆ ನಾವು ಮಾಡಿದ ತಪ್ಪಿನಿಂದಾಗಿ ಪಕ್ಷ ಅಧಿಕಾರದಿಂದ ದೂರ ಉಳಿಯುವಂತಾಗಿದೆ. ಇಂದು ದೇಶಕ್ಕೆ ನರೇಂದ್ರ ಮೋದಿ ನಾಯಕತ್ವದ ಅವಶ್ಯಕತೆ ಇದೆ. ಇದಕ್ಕಾಗಿ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕಾದ ಅವಶ್ಯಕತೆ ಇದೆ. ರಾಜ್ಯದಲ್ಲಿನ ಖನಿಜ ಸಂಪತ್ತು ಲೂಟಿಯ ಬಗ್ಗೆ ದಿಟ್ಟ ನಿರ್ಧಾರ ತೆಗೆದುಕೊಂಡ ನನ್ನನ್ನೇ ತಪ್ಪಿತಸ್ಥನನ್ನಾಗಿ ಮಾಡಲಾಯಿತು. ಆದರೆ ರಾಜ್ಯ ಉಚ್ಚ ನ್ಯಾಯಾಲಯ ಇದನ್ನು ತಿರಸ್ಕರಿಸಿದೆ. ನನ್ನ ಬಗ್ಗೆ ಎಚ್ಚರದಿಂದ ಮಾತನಾಡಿ ಎಂದರು.