ದೇವರಗುಡ್ಡದಲ್ಲಿ ಗ್ರಂಥಪಾಲಕ ಈರಪ್ಪ ಸಾವು
ರಾಣಿಬೆನ್ನೂರು: ತಾಲೂಕಿನ ದೇವರಗುಡ್ಡ ಮಾಲತೇಶ ದೇವಸ್ಥಾನಕ್ಕೆ ಆಗಮಿಸಿದ್ದ ಗದುಗಿನ ಭಕ್ತರೊಬ್ಬರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ.
ಈರಪ್ಪ ಹಾವಣ್ಣವರ (58) ಎಂಬವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಭಾನುವಾರ ಮೈಲಾರ ದೇವಸ್ಥಾನಕ್ಕೆ ಆಗಮಿಸಿ ಅಲ್ಲಿಂದ ದೇವರಗುಡ್ಡ ದೇವಾಲಯಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ರಾಣಿಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈರಪ್ಪ ಅವರು ಗದಗ ತಾಲೂಕಿನ ಹೊಸಹಳ್ಳಿ ಗ್ರಾಮದವರಾಗಿದ್ದು, ಶಿವಮೊಗ್ಗದ ಕೇಂದ್ರ ಗ್ರಂಥಾಲಯದಲ್ಲಿ ಮುಖ್ಯ ಗ್ರಂಥಪಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.ಈರಪ್ಪನವರ ನಿಧನಕ್ಕೆ ಗದಗ ಜಿಲ್ಲಾ ಕಸಾಪ ಅಧ್ಯಕ್ಷ ಶಿವಪ್ಪ ಕುರಿ, ಸ್ವಗ್ರಾಮ ಗದಗ ತಾಲೂಕಿನ ಹೊಸಹಳ್ಳಿಯ ಬೂದೀಶ್ವರ ಸಂಸ್ಥಾನ ಮಠದ ಅಭಿನವ ಬೂದೀಶ್ವರ ಸ್ವಾಮೀಜಿ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಸಂಗಪ್ಪ ಬ್ಯಾಹಟ್ಟಿ ಸಂತಾಪ ಸೂಚಿಸಿದ್ದಾರೆ.