ಮಹಿಳೆಯರು ಅಡುಗೆ ಮಾಡಲು ಸೀಮಿತವಲ್ಲ
ಗದಗ: ಮಹಿಳೆಯರು ಅಡುಗೆ ಮಾಡಲು ಸೀಮಿತವಲ್ಲ ಎಂದು ಎಚ್ಚರಿಸಿದವರು ಸರೋಜಿನಿ ನಾಯ್ಡು ಎಂದು ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಹೇಳಿದರು. ಅವರು ಗುರುವಾರ ಬೆಟಗೇರಿಯ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸರೋಜಿನಿ ನಾಯ್ಡು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದ ಕೋಗಿಲೆ ಸರೋಜಿನಿ ನಾಯ್ಡು ರಾಷ್ಟ್ರೀಯ ಭಾರತದ ಮೊದಲ ಕಾಂಗ್ರೆಸ್‌ನ ಮೊದಲನೆಯ ಮಹಿಳಾ ಅಧ್ಯಕ್ಷರು ಹಾಗೂ ಉತ್ತರ ಪ್ರದೇಶದ ಮೊದಲನೆಯ ಮಹಿಳಾ ರಾಜ್ಯಪಾಲರಾದರು. ಸರೋಜಿನಿಯವರು ಸಮಕಾಲೀನ ಇಂಡಿಯಾ ದೇಶದ ಜನರ ಜೀವನ ಕ್ರಮ ತಮ್ಮ ಕವಿತೆಗಳಲ್ಲಿ ವರ್ಣಿಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ವೈ.ಆರ್. ಹಿರೇಗೌಡರ ಮುಂತಾದವರು ಮಾತನಾಡಿದರು. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕ ಸಿ.ಎಂ. ಮಾರನಬಸರಿ ಸ್ವಾಗತಿಸಿದರು. ಉಪನ್ಯಾಸಕ ಎಸ್.ಆರ್. ವಾಲ್ಮೀಕಿ ವಂದಿಸಿದರು.