ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ವಿದ್ಯಾರ್ಥಿಗಳಿಂದ ಪ್ರತಿಭಟನೆ

Vishwanath S
Updated On : 20 Feb 2014, 10:50 am

ಕನ್ನಡಪ್ರಭ ವಾರ್ತೆ, ಗದಗ, ಫೆ. 19
ಬಿಸಿಎಂ ವಿದ್ಯಾರ್ಥಿಗಳನ್ನು ಶುಲ್ಕ ವಿನಾಯ್ತಿ ಸೌಲಭ್ಯದಿಂದ ದೂರವಿಡುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ವತಿಯಿಂದ ಬುಧವಾರ ನಗರದ ಗಾಂಧಿವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ಹೊಸ ಕಾಯ್ದೆಯನ್ನು ಜಾರಿಗೆ ತಂದು ವಿದ್ಯಾರ್ಥಿಗಳನ್ನು ಶುಲ್ಕ ವಿನಾಯ್ತಿಯಿಂದ ದೂರವಿಡುವ ಪ್ರಕ್ರಿಯೆ ಮಾಡುತ್ತಿದೆ. ಸರ್ಕಾರದ ಆದೇಶ ಸಂಖ್ಯೆ 589/ಬಿಎಂಸ್/2013 ದಿನಾಂಕ 5-10-2013ರ ಪ್ರಕಾರ ಈ ಹಿಂದೆ ಬಿಸಿಎಂ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಶುಲ್ಕ ವಿನಾಯ್ತಿ ರದ್ದಾಗಲಿದ್ದು, ವಿದ್ಯಾರ್ಥಿಗಳು ಪೂರ್ಣ ಶುಲ್ಕವನ್ನು ಪಾವತಿಸುವ ಪರಿಸ್ಥಿತಿ ಉಂಟಾಗಲಿದೆ. ಈ ಆದೇಶದಂತೆ ವಿದ್ಯಾರ್ಥಿಗಳು ಪಾವತಿಸಿದ ಹೆಚ್ಚುವರಿ ಶುಲ್ಕವನ್ನು ನಗದು ವರ್ಗಾವಣೆ ಸೌಲಭ್ಯದಡಿ ಸರ್ಕಾರವು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಿದೆ. ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಈ ಕಾಯ್ದೆ ರಾಜ್ಯದ ಬಡ, ಗ್ರಾಮೀಣ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ನೇರ ದುಷ್ಪರಿಣಾಮವಾಗಲಿದೆ. ಕಾರಣ ವಿದ್ಯಾರ್ಥಿಗಳು ಸರ್ಕಾರಿ ಮತ್ತು ಅನಾನುಕೂಲತೆಗಳಿಂದ ಕೂಡಿರುವ ಕಾಲೇಜುಗಳಲ್ಲಿಯೇ ಪ್ರವೇಶ ಪಡೆದಿರುತ್ತಾರೆ. ಈ ಕಾಲೇಜುಗಳಲ್ಲಿ ತರಗತಿಗಳು ನಿಯಮಿತವಾಗಿ ನಡೆಯದಿರುವುದು, ಉಪನ್ಯಾಸಕರ ಕೊರತೆ, ಲ್ಯಾಬ್, ಪ್ರಾಯೋಗಿಕ ಉಪಕರಣಗಳ ಕೊರತೆ ಹೀಗೆ ಮೂಲ ಸೌಲಭ್ಯಗಳ ಕೊರತೆಗಳ ಮಧ್ಯದಲ್ಲಿಯೂ ವಿದ್ಯಾರ್ಥಿಗಳು ಅಧ್ಯಯನ ಮಾಡಿರುತ್ತಾರೆ. ಹಾಗಾಗಿ ಸರ್ಕಾರ ಮೊದಲು ರಾಜ್ಯ ಸರ್ಕಾರ ಕಾಲೇಜುಗಳು ಸೂಕ್ತ ಸೌಲಭ್ಯಗಳಿರುವಂತೆ ನೋಡಿಕೊಳ್ಳುವಲ್ಲಿ ಹೆಚ್ಚಿನ ಆಸಕ್ತಿ ನೀಡಬೇಕಾಗಿದೆ.
ಶುಲ್ಕ ವಿನಾಯ್ತಿಯನ್ನು ಆಪೇಕ್ಷಿಸುವ ವಿದ್ಯಾರ್ಥಿಗಳು ಬಹುತೇಕವಾಗಿ ಹಾಸ್ಟೆಲ್‌ನಲ್ಲಿದ್ದು, ಮೂಲ ಸೌಲಭ್ಯಗಳ ಕೊರತೆಯ ಮಧ್ಯದಲ್ಲಿಯೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಇವರು ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಜತೆಗೆ ಕಾಲೇಜುಗಳಲ್ಲಿ ಶುಲ್ಕ ವಿನಾಯ್ತಿ ನಿರಾಕರಣೆ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಮಾರಕವಾಗಿ ಪರಿಣಮಿಸಲಿದೆ. ಈ ಕುರಿತು ಸರ್ಕಾರವು ಬಡ ವಿದ್ಯಾರ್ಥಿಗಳ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಹೊರೆಯಾಗಲಿರುವ ಈ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement