ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬಸ್ ನಿಲ್ದಾಣ ಉದ್ಘಾಟಿಸಿದ ಸಿಎಂ

Vishwanath S
Updated On : 23 Feb 2014, 12:26 pm

ರೋಣ: ಪಟ್ಟಣದಲ್ಲಿ ರು. 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬೃಹತ್ ಹೈಟೆಕ್ ಬಸ್ ನಿಲ್ದಾಣವನ್ನು ಶನಿವಾರ ಸಂಜೆ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ನರೇಗಲ್ ಪಟ್ಟಣದಲ್ಲಿ ಬಸ್ ನಿಲ್ದಾಣದ ನೂತನ ವಾಣಿಜ್ಯ ಮಳಿಗೆ, ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಬಾಲಕಿಯರ ವಸತಿ ನಿಲಯ ಉದ್ಘಾಟನೆ, ಮುನವಳ್ಳಿ-ಕೋಟುಮಚಗಿ ರಾಜ್ಯ ಹೆದ್ದಾರಿ 83ರ 106.70ರಿಂದ 107.30ರ ವರೆಗೆ (ರೋಣ ಪಟ್ಟಣದ ಪರಿಮಿತಿಯಲ್ಲಿ) ರಸ್ತೆ ಸುಧಾರಣೆ ಹಾಗೂ ಅಗಲೀಕರಣ ಕಾಮಗಾರಿ, ತಾಲೂಕಿನ ರೋಣ-ಜಕ್ಕಲಿ-ನರೇಗಲ್ ಜಿಲ್ಲಾ ಮುಖ್ಯ ರಸ್ತೆಯ ರೋಣದಿಂದ 15 ಕಿ.ಮೀ ವರಗಿನ ಆಯ್ದ ಭಾಗಗಳನ್ನು ಕೇಂದ್ರ ರಸ್ತೆ ನಿಧಿ (ಸಿಆರ್ಎಫ್) ಅಡಿ ಅಭಿವೃದ್ಧಿ ಪಡಿಸುವ ಕಾಮಗಾರಿ, ರೋಣದಲ್ಲಿ ಬಿಇಒ ಕಚೇರಿ ಕಟ್ಟಡ ನಿರ್ಮಾಣ, ಪಟ್ಟಣದ ಸರ್ಕಾರಿ ಪ್ರೌಢಶಾಲೆಗೆ ಆರ್ಎಂಎಸ್ಸಿ ಅಡಿಯಲ್ಲಿ ಮಂಜೂರಾದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿ ಮತ್ತು ಪಟ್ಟಣದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು.
ರೈತರಿಗೆ ಸರ್ಕಾರದ ವತಿಯಿಂದ ಬಡ್ಡಿ ರಹಿತ ಸಾಲದ ಚೆಕ್ ಮತ್ತು ಸ್ವ-ಸಹಾಯ ಗುಂಪುಗಳಿಗೆ ಶೇ. 4ರ ಬಡ್ಡಿ ದರದಲ್ಲಿ ಸಹಾಯಧನದ ಚೆಕ್ಗಳನ್ನು ಸಿಎಂ ಸಿದ್ದರಾಮಯ್ಯ ವಿತರಿಸಿದರು. ಬಳಿಕ ಗದಗ ವಿಭಾಗಕ್ಕೆ ನೂತನವಾಗಿ ಬಂದಿರುವ 6 ಬಸ್ಗಳ ಸಂಚಾರಕ್ಕೆ ಚಾಲನೆ ನೀಡಿದರು.
ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ
ಪಟ್ಟಣದ ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದ ಸಿಎಂ ಸಿದ್ದರಾಮಯ್ಯ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಗದಗ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯಲು ಬಿಡುವುದಿಲ್ಲ. ಅದರ ಬಗ್ಗೆ ಅಗತ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಈ ವೇಳೆ ಸಚಿವರಾದ ಎಚ್.ಕೆ. ಪಾಟೀಲ, ಶರಣಪ್ರಕಾಶ ಪಾಟೀಲ, ಎಚ್.ಎಸ್. ಮಹದೇವ ಪ್ರಸಾದ, ಶಾಸಕ ಜಿ.ಎಸ್. ಪಾಟೀಲ, ಕೆಸಿಸಿ ಬ್ಯಾಂಕ್ ಅಧ್ಯಕ್ಷ ಐ.ಎಸ್.ಪಾಟೀಲ, ಮಾಜಿ ಸಂಸದ ಆರ್.ಎಸ್.ಪಾಟೀಲ, ವಿ.ಆರ್. ಗುಡಿಸಾಗರ, ದಶರಥ ಗಾಣಿಗೇರ, ವೀರಣ್ಣ ಶೆಟ್ಟರ್, ಕೆಎಸ್ಆರ್ಟಿಸಿ ಗದಗ ವಿಭಾಗ ನಿಯಂತ್ರಣಾಧಿಕಾರಿ ಗದ್ದನಕೇರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement