ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ವಿಕಲಚೇತನರಿಗೆ ಶಿಬಿರ

Lingaraj Badiger
Updated On : 3 Jan 2014, 12:35 pm

ಗದಗ:  2013-14ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯ ವಿಕಲಚೇತನರಿಗೆ ಅಂಗವಿಕಲತೆಯು ಶಸ್ತ್ರ ಚಿಕಿತ್ಸೆಯ ಮೂಲಕ ನಿವಾರಣೆಯಾಗುವುದರಿಂದ ಅಂತಹ ಅರ್ಹ ವಿಕಲಚೇತನರಿಗೆ ಅಗತ್ಯ ವೈದ್ಯಕೀಯ ಶಸ್ತ್ರ ಚಿಕಿತ್ಸೆ ಕೈಗೊಳ್ಳಲು ಪೂರ್ವಭಾವಿಯಾಗಿ ಪರಿಶೀಲನಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಹಾಜರಾಗಲು ಅರ್ಹ ವಿಕಲಚೇತನರಿಂದ ಹೆಸರು ನೋಂದಾಯಿಸಲು ಕೋರಲಾಗಿದೆ. ಹೆಸರು ನೋಂದಾಯಿಸಲು ಬಯಸುವವರು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದ ಎದುರಿಗೆ, ಗದಗ ಇವರಲ್ಲಿ ಖುದ್ದಾಗಿ ಅಗತ್ಯ ದಾಖಲಾತಿಗಳೊಂದಿಗೆ ಜ. 7 ರೊಳಗೆ ಸಂಪರ್ಕಿಸಲು ಕೋರಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಡಿ.ಎನ್. ಮೂಲಿಮನಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ (9900124253, 08372-220419) ಗದಗ ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಸಕಾಲ ತಂತ್ರಾಂಶ ಅಳವಡಿಕೆಗೆ ಸೂಚನೆ
ಗದಗ:  ಜಿಲ್ಲೆಯಲ್ಲಿ ಸಕಾಲದ ಅರ್ಜಿಗಳನ್ನು ಕಡ್ಡಾಯವಾಗಿ ಅದಕ್ಕಾಗಿ ನಿಗದಿಪಡಿಸಿ ತಂತ್ರಾಂಶದಲ್ಲಿ ಅಳವಡಿಸಿ ಸ್ವೀಕರಿಸಲು ಹಾಗೂ ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಲು ಸಂಬಂಧಿತ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಆದ್ಯತೆಯ ಮೇಲೆ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement