7ರಂದು ಉಚಿತ ಆರೋಗ್ಯ ತಪಾಸಣೆ
ಗದಗ: ಜ. 7ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಸಭಾಭವನದಲ್ಲಿ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ನಿವೃತ್ತ ಹಿರಿಯ ನಾಗರಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ, ಔಷಧೋಪಚಾರ ಕಾರ್ಯಕ್ರಮವನ್ನು ಗದಗ-ಬೆಟಗೇರಿ ರೋಟರಿ ಕ್ಲಬ್ನ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಉದ್ಘಾಟಿಸುವರು. ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸಿ. ಗಾಣಿಗೇರ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 3ಕ್ಕೆ ಹಾವೇರಿ ಲೋಕಸಾಭಾ ಸಂಸದ ಶಿವಕುಮಾರ ಉದಾಸಿ ಅವರು ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಾ. ಎಸ್.ವಿ. ಸಂಕನೂರ ಅವರನ್ನು ಸನ್ಮಾನಿಸುವರು. ಅತಿಥಿಗಳಾಗಿ ಗದಗ-ಬೆಟಗೇರಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರದೀಪ ಉಗಲಾಟದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಆರ್.ಎನ್. ಪಾಟೀಲ, ಮತ್ತಿತರರು ಆಗಮಿಸುವರು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಬಿ. ಹೂಗಾರ, ರಾಜಶೇಖರ ಕರಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.