ರಾಜ್ಯಮಟ್ಟಕ್ಕೆ ಆಯ್ಕೆ
ಗಜೇಂದ್ರಗಡ: ಗದಗನಲ್ಲಿ ಈಚೆಗೆ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸ್ಥಳೀಯ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆಗೈದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಮಯ್ಯ ಅತ್ತಾರ, ಮುಸ್ಕಾನ ಕಟ್ಟಿಮನಿ, ಆಪ್ರೀನ ಸಣ್ಣಕ್ಕಿ, ಅಪ್ಸಾನ್ ದರ್ಗಾದ ಕವ್ಹಾಲಿ ಸ್ಪರ್ಧೆಯಲ್ಲಿ ಪ್ರಥಮ, ಫರೀದಾ ನಂದಿಹಾಳ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದಲ್ಲಿ ಆಯ್ಕೆಯಾಗುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆಂದು ಶಾಲಾ ಮೇಲುಸ್ತುವಾರಿ ಸಮಿತಿ ಹಾಗೂ ಶಿಕ್ಷಕರು, ಮುಖ್ಯೋಪಾಧ್ಯಾಯರು ಅಭಿನಂದನೆ ಸಲ್ಲಿಸಿದ್ದಾರೆ.