ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಉತ್ತಮ ಸಮಾಜ ನಿರ್ಮಾಣಕ್ಕೆ ಕ್ರೀಡಾಕೂಟ ಸಹಕಾರಿ

Lingaraj Badiger
Updated On : 7 Jan 2014, 12:23 pm

ಕನ್ನಡಪ್ರಭ ವಾರ್ತೆ, ಗದಗ, ಜ. 6
ಉತ್ತಮ ಸಮಾಜ ನಿರ್ಮಾಣಕ್ಕೆ ಕ್ರೀಡಾಕೂಟ ಸಹಕಾರಿಯಾಗಿದ್ದು, ನೌಕರರು ಇಂತಹ ಕ್ರೀಡಾಕೂಟ ಹಮ್ಮಿಕೊಳ್ಳುವ ಮೂಲಕ ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಹೇಳಿದರು.
ಅವರು ಸೋಮವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ಕ್ರೀಡಾಮನೋಭಾವನೆ ಹೊಂದುವುದು ಅವಶ್ಯ. ಕ್ರೀಡೆಗೆ ಯಾವುದೇ ರೀತಿಯ ವಯಸ್ಸಿಲ್ಲ. ಎಲ್ಲ ವರ್ಗದ, ಎಲ್ಲ ವಯೋವಾನದವರೂ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಇಂದು ಯುವಕರು, ನೌಕರರು ಹಲವು ದುಶ್ಟಟಗಳ ದಾಸರಾಗುತ್ತಿರುವುದು ನೋವಿನ ಸಂಗತಿ. ಈ ಕುರಿತು ನೌಕರರು ಜಾಗೃತಿ ಹೊಂದಿ, ದುಶ್ಚಟಗಳಿಂದ ದೂರವಾಗಿ, ತಮ್ಮ ದೈಹಿಕ ಶಕ್ತಿಯನ್ನು ವೃದ್ಧಿಸುವುದರೊಂದಿಗೆ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಿ ಎಂದರು.
ಕ್ರೀಡಾಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಎಸ್.ಡಿ. ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆ ಯಶಸ್ವಿಯಾಗಬೇಕಾದರೆ ಈ ವ್ಯವಸ್ಥೆಯ ನರನಾಡಿಗಳಾದ ನೌಕರರು ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಅಂದಾಗ ದೇಶದ ಪ್ರಗತಿಯೂ ಸಾಧ್ಯ. ನೌಕರರು ಈ ಕುರಿತು ಜಾಗ್ರತರಾಗಬೇಕು ಎಂದರು.
ಸಹಾಯಕ ನಿರ್ದೇಶಕ ಕೆ. ಶಂಕರ, ನೌಕರರ ಸಂಘದ ರೋಣ ತಾಲೂಕು ಅಧ್ಯಕ್ಷ ಶಿವಪುತ್ರಪ್ಪ ದೊಡ್ಡಮನಿ, ಮುಂಡರಗಿ ತಾಲೂಕು ಅಧ್ಯಕ್ಷ ಭಾವಿಮನಿ, ರಾಜ್ಯ ಪರಿಷತ್ ಸದಸ್ಯ ವಿ.ಬಿ. ಪೊಲೀಸ್‌ಪಾಟೀಲ್, ಜಿಲ್ಲಾ ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಬೇಲೇರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ರವಿ ಗುಂಜಿಕರ ಸ್ವಾಗತಿಸಿದರು. ವೈ.ಕೆ.ಚೌಡಾಪುರ ಕಾರ್ಯಕ್ರಮ ನಿರೂಪಿಸಿದರು. ಕೆ.ಪಿ. ಕಾಜಗಾರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement