ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಹಮಾಲಿ ಕಾರ್ಮಿಕರಿಂದ ಮನವಿ

Lingaraj Badiger
Updated On : 7 Jan 2014, 12:23 pm

ಮುಂಡರಗಿ:  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪಡಿತರ ವಿತರಣೆ ಮಾಡುತ್ತಿರುವ ಹಮಾಲಿ ಕಾರ್ಮಿಕರಿಗೆ ನ್ಯಾಯಯುತವಾದ ಕೂಲಿ ಹಾಗೂ ಹಕ್ಕುಗಳಿಗೆ ಒತ್ತಾಯಿಸಿ ತಾಲೂಕು ಲೋಡಿಂಗ್ ಮತ್ತು ಅನ್‌ಲೋಂಡಿಂಗ್ ಸಂಘದ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ನೀಡಿ ಆಗ್ರಹಿಸಿದ್ದಾರೆ.
ಅನ್ನಭಾಗ್ಯ ಯೋಜನೆಯನ್ನು ಸಮರ್ಪಕವಾಗಿ ತಲುಪಿಸುವ ಕಾರ್ಯ ಮಾಡುತ್ತಿರುವ ಹಮಾಲಿ ಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಕೂಲಿಯಿಂದ ಕುಟುಂಬದ ನಿರ್ವಹಣೆಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಸರ್ಕಾರ ಈ ಕೂಡಲೇ ಹಮಾಲಿ ಕಾರ್ಮಿಕರ ಕೂಲಿ ಹೆಚ್ಚಳ ಮಾಡಬೇಕೆನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವ ಕುರಿತು ಮನವಿಯಲ್ಲಿ ತಿಳಿಸಿದ್ದಾರೆ.
ತಾಲೂಕು ಲೋಡಿಂಗ್ ಮತ್ತು ಅನ್‌ಲೋಂಡಿಂಗ್ ಸಂಘದ ಅಧ್ಯಕ್ಷ ರಾಮಣ್ಮ ಪೂಜಾರ, ಸುಭಾಸ ಹಳ್ಳಿಕೇರಿ, ಸತೀಶ ಪೂಜಾರ, ಮಂಜಪ್ಪ ಪೂಜಾರ, ಚಾಂದ್‌ಸಾಬ್ ಗೊಂಡಬಾಳ, ಮಂಜುನಾಥ ಉಳ್ಳಾಗಡ್ಡಿ, ಮಲ್ಲಪ್ಪ ಬಾರಕೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement