ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಚುನಾವಣೆಗೂ ಮೊದಲೇ ಯೋಜನೆ ಪೂರ್ಣಗೊಳಿಸಿ

Lingaraj Badiger
Updated On : 8 Jan 2014, 1:16 am

ಕನ್ನಡಪ್ರಭ ವಾರ್ತೆ ಗದಗ, ಜ. 7
ಮಾರ್ಚ್ನಲ್ಲಿ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಬೀಳ್ಳಲಿದ್ದು, ಇದಕ್ಕೂ ಮುನ್ನವೇ ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳು ಪ್ರಾರಂಭವಾಗಬೇಕು ಎಂದು ಹಾವೇರಿ ಸಂಸದ ಶಿವಕುಮಾರ ಉದಾಸಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಪಂ ಸಭಾಭವನದಲ್ಲಿ ಜಿಲ್ಲಾ ಜಾಗ್ರತ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಈಗಾಗಲೇ ಪ್ರಾರಂಭವಾಗಿರುವ ಯೋಜನೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಪ್ರಾರಂಭಗೊಳ್ಳಬೇಕಾದ ಯೋಜನೆಗಳಿಗೆ ವೇಗವಾಗಿ ಚಾಲನೆ ನೀಡಬೇಕು. ಒಂದುವೇಳೆ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಬಿದ್ದರೆ, ಯೋಜನೆಗಳು ನೆನಗುದಿಗೆ ಬೀಳಲಿದ್ದು, ಈ ಅವಧಿಗೆ ಮುನ್ನವೇ ಯೋಜನೆ ಜಾರಿಗೊಳಿಸುವತ್ತ ಗಮನ ನೀಡಬೇಕು.
ಜಿಲ್ಲೆಯ ಲಕ್ಕುಂಡಿಯಲ್ಲಿ ಹೂ ಸಂಗ್ರಹಿಸುವ ಕುರಿತು ಶೈತ್ಯಾಗಾರ ನಿರ್ಮಾಣ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದಕ್ಕುತ್ತರಿಸಿದ ತೋಟಗಾರಿಕೆ ಅಧಿಕಾರಿ, ಈಗಾಗಲೇ ಸ್ಥಳ ಪರಿಶೀಲನೆ ಮಾಡಲಾಗಿದೆ ಎಂದರು.
ಸಾರ್ವಜನಿಕರಿಗೆ ಅಗತ್ಯವಾಗಿ ಬೇಕಾಗಿರುವ ಸೇವೆಗಳಲ್ಲಿ ಒಂದಾದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿಮಾಡಿ ಸೇವೆಗೆ ಅಣಿಯಾಗುವಂತೆ ಸಂಸದ ಉದಾಸಿ ಡಿಎಚ್ಒಗೆ ಸೂಚಿಸಿದರು.
ನಿರ್ಮಲ ಭಾರತ ಅಭಿಯಾನದ ಕುರಿತ ಚರ್ಚೆಯ ಸಂದರ್ಭದಲ್ಲಿ ಜಿಪಂ ಸಿಇಒ ವೀರಣ್ಣ ತುರಮರಿ ಮಾತನಾಡಿ, ಜಿಲ್ಲೆಯಲ್ಲಿ ಮಾರ್ಚ್ ಅಂತ್ಯದೊಳಗೆ 35 ಸಾವಿರ ಶೌಚಾಲಯ ನಿರ್ಮಿಸುವ ಗುರಿ ಹೊಂದಲಾಗಿದೆ. ಈಗಾಗಲೇ 7765 ಶೌಚಾಲಯ ನಿರ್ಮಾಣವಾಗಿವೆ ಎಂದರು.
ಸಭೆಯಲ್ಲಿ ಜಿಪಂ ಅಧ್ಯಕ್ಷೆ ಕಮಲವ್ವ ಸಜ್ಜನರ, ಉಪಾಧ್ಯಕ್ಷ ರಮೇಶ ಮುಂದಿನಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡ್ರ, ಜಾಗ್ರತ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯ ರಾಮ್ರಾಜು, ಭೋಜಪ್ಪ ಲಮಾಣಿ ಸೇರಿದಂತೆ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement